ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ (Delhi Assembly Election) ತಮ್ಮ ಪಕ್ಷವು ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ (Congress) ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಜೊತೆಗೆ ಆಪ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವರದಿ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸ್ಪಷ್ಟಪಡಿಸಿದ ಅವರು, ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: BBK 11: ಮೋಕ್ಷಿತಾ ಹೇಳಿದ್ದು ಸರಿ- ಮಂಜು ಜೊತೆಗಿನ ಫ್ರೆಂಡ್‌ಶಿಪ್ ಕಟ್ ಎಂದ ಗೌತಮಿ
Advertisement
Advertisement
ಇಂಡಿಯಾ ವಿರೋಧ ಪಕ್ಷದ ಭಾಗವಾಗಿದ್ದರೂ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಅರವಿಂದ್ ಕೇಜ್ರಿವಾಲ್ ತಳ್ಳಿಹಾಕಿದ್ದು ಇದೇ ಮೊದಲಲ್ಲ. ಈ ತಿಂಗಳ ಆರಂಭದಲ್ಲಿ, ಕೇಜ್ರಿವಾಲ್ ಪಕ್ಷವು ಸತತ ಮೂರನೇ ಅವಧಿಗೆ ಗಮಹರಿಸುತ್ತಿರುವುದರಿಂದ ದೆಹಲಿ ವಿಧಾನಸಭಾ ಚುನಾವಣೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಸ್ಸಂದಿಗ್ಧವಾಗಿ ಹೇಳಿದರು.
Advertisement
2015 ರಿಂದ ದೆಹಲಿಯಲ್ಲಿ ಎಎಪಿ ಅಧಿಕಾರದಲ್ಲಿದೆ. ಈ ಚುನಾವಣೆ ಮೂಲಕ ದೆಹಲಿಯಲ್ಲಿ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸುವ ವಿಫಲ ಪ್ರಯತ್ನ ಮಾಡುತ್ತಿದೆ. ಆದರೆ ಇಂಡಿಯಾ ಒಕ್ಕೂಟ ಒಟ್ಟಾಗಿ ಚುನಾವಣೆಗೆ ಹೋಗುವ ಲೆಕ್ಕಾಚಾರದಲ್ಲಿದೆ.
Advertisement
ಲೋಕಸಭೆ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಿದ್ದವು ಆದರೆ ಬಿಜೆಪಿ ಎಲ್ಲಾ ಸ್ಥಾನಗಳನ್ನು ಗೆದ್ದಿತ್ತು. ಬಳಿಕ ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೆಂದರ್ ಯಾದವ್ ಅವರು ಎಎಪಿ ಜೊತೆಗಿನ ಮೈತ್ರಿಯನ್ನು “ತಪ್ಪು” ಎಂದು ಕರೆದರು ಮತ್ತು ನಗರದ ಎಲ್ಲಾ 70 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪ್ರತಿಪಾದಿಸಿದರು.
ಈ ನಿರ್ಧಾರವು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆಗೆ ವೇದಿಕೆಯನ್ನು ಸಿದ್ಧಪಡಿಸಿದ್ದು, ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿವೆ. 2015 ಮತ್ತು 2020ರಲ್ಲಿ ನಡೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ, ಎಎಪಿ ಕ್ರಮವಾಗಿ 67 ಮತ್ತು 62 ಸ್ಥಾನಗಳನ್ನು ಗೆದ್ದಿದ್ದರೆ, 70 ಸದಸ್ಯರ ಶಾಸಕಾಂಗದಲ್ಲಿ ಬಿಜೆಪಿ ಮೂರು ಮತ್ತು ಎಂಟು ಸ್ಥಾನಗಳನ್ನು ಪಡೆದುಕೊಂಡಿತ್ತು. ಎರಡೂ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿತ್ತು.ಇದನ್ನೂ ಓದಿ: ಭಾರತಕ್ಕೂ ಮೊದಲೇ ಚಾಂಪಿಯನ್ಸ್ ಟ್ರೋಫಿ ಬಾಯ್ಕಾಟ್ ಮಾಡ್ಬೇಕು – ಪಾಕ್ ಹೊಸ ಕ್ಯಾತೆ