ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಏಕಾಂಗಿಯಾಗಿ ಸ್ವರ್ಧೆ ಮಾಡಲಿದ್ದು, ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೇರಿ ಯಾವ ಪಕ್ಷದ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆಪ್ ಏಕಾಂಗಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸುವ ವಿಶ್ವಾಸ ಇದೆ ಎಂದರು. ಈ ಮೂಲಕ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಊಹಾಪೋಹ ಸುದ್ದಿಗಳಿಗೆ ತೆರೆ ಎಳೆದರು.
Advertisement
Advertisement
2012ರಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಚನೆಗೊಂಡ ಆಮ್ ಆದ್ಮಿ ಪಕ್ಷವು ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು 2013ರಲ್ಲಿ ಉರುಳಿಸಿತು. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ. 24.55 ರಷ್ಟು, ಬಿಜೆಪಿ ಶೇ. 33.07 ರಷ್ಟು, ಎಎಪಿ ಶೇ. 29.49 ರಷ್ಟು ಮತಗಳನ್ನು ಗಳಿಸಿತ್ತು.
Advertisement
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಮಾಡಿಕೊಳ್ಳಲಿದೆ ಎನ್ನಲಾಗಿತ್ತು. ಆದರೆ ಸೀಟು ಹೊಂದಾಣಿಕೆಯಲ್ಲಿ ಮಾತುಕತೆ ಅಂತಿಮವಾಗದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಮೈತ್ರಿ ರದ್ದಾಗಿತ್ತು.