ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 63ನೇ ನ್ಯಾಯಾಲಯದ ತಿರಸ್ಕರಿಸಿದೆ.
ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿರುವುದರಿಂದ ಆರೋಪಿ ನಲಪಾಡ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಿದ್ವತ್ ಪರ ವಕೀಲರು ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
Advertisement
Advertisement
ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸರ್ಕಾರಿ ಅಭಿಯೋಜಕ ಶ್ಯಾಮ್ ಸುಂದರ್, ಆರೋಪಿ ವಿರುದ್ಧ ಇದ್ದ ಬಲವಾದ ಸಾಕ್ಷಿಗಳು ಹಾಗೂ ನಲಪಾಡ್ ತಂದೆ ಶಾಸಕರಾಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ನ್ಯಾಯಾಲಯ ಅರ್ಜಿ ತಿರಸ್ಕರಿಸಿದೆ. ಈ ಹಿಂದೆ ಇದೇ ಕೋರ್ಟ್‍ನಲ್ಲಿ ಜಾಮೀನು ನಿರಾಕರಿಸಲಾಗಿತ್ತು. ಆರೋಪಿ ವಿರುದ್ಧ ವಿಡಿಯೋ ಹಾಗೂ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯೂ ಅರ್ಜಿ ತಿರಸ್ಕೃತಗೊಳ್ಳಲು ಕಾರಣ ಎಂದು ತಿಳಿಸಿದರು.
Advertisement
ಸಮಾಜದಲ್ಲಿ ನಲಪಾಡ್ ಪ್ರಕರಣ ಸಾಕಷ್ಟು ಭಯವನ್ನು ಉಂಟು ಮಾಡಿದೆ. ಅಲ್ಲದೇ ಈ ಹಿಂದೆಯೂ ಸಹ ಇಂತಹ ಹಲವು ಪ್ರಕರಣಗಳು ನಡೆದಿದ್ದು ಪದೇ ಪದೇ ಮರುಕಳಿಸುತ್ತಿದೆ ಎಂಬ ವಾದವನ್ನು ಮಂಡಿಸಲಾಗಿದೆ ಎಂದು ತಿಳಿಸಿದರು.
Advertisement
ಏನಿದು ಪ್ರಕರಣ?
ಘಟನೆ ನಡೆದ ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತ್ತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ಅನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಹೊಡೆದಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.
ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.