ಧಾರವಾಡ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ( B Y Vijayendra ) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ವಿಚಾರದಲ್ಲಿ ವಿಶೇಷ ಏನೂ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Satish jarkiholi) ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಮತ್ತು ಯತ್ನಾಳ್ ಇಬ್ಬರೂ ಒಂದೇ ಪಕ್ಷದವರು. ಅವರಿಬ್ಬರೂ ಭೇಟಿ ಮಾಡಿದರೆ ನಾವೇನು ಮಾಡುವುದು? ವೈಮನಸ್ಸು ಎಲ್ಲ ಪಕ್ಷಗಳಲ್ಲೂ ಇರುತ್ತದೆ. ನಮ್ಮ ಪಕ್ಷದಲ್ಲೂ ಭಿನ್ನಾಭಿಪ್ರಾಯಗಳಿರುತ್ತವೆ. ಜಗಳವಾಡುತ್ತೇವೆ, ಚುನಾವಣೆ ಬಂದಾಗ ಮತ್ತೆ ಒಂದಾಗುತ್ತೇವೆ. ಇದರಲ್ಲಿ ವಿಶೇಷ ಏನೂ ಇಲ್ಲ” ಎಂದರು.
ಕಬ್ಬು ಬೆಳೆಗಾರರ ಹೋರಾಟದ ವಿಚಾರವಾಗಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸರ್ಕಾರ ಯಾರ ಪರವಾಗಿಯೂ ಇಲ್ಲ, ವಿರೋಧವಾಗಿಯೂ ಇಲ್ಲ. ನ್ಯಾಯಸಮ್ಮತ ಬೇಡಿಕೆಗಳಿದ್ದರೆ ಬೆಂಬಲ ನೀಡುತ್ತೇವೆ. ನಮ್ಮ ಮುಖ್ಯಮಂತ್ರಿಗಳೂ ಇದೇ ಮಾತನ್ನು ಹೇಳಿದ್ದಾರೆ ಎಂದರು.
ಕಬ್ಬು ಬೆಳೆಗಾರರಿಗೆ ಮಾತ್ರವಲ್ಲ, ರೈತರ ಹಿತದೃಷ್ಟಿಯಿಂದ ಸರ್ಕಾರ ಬೆಂಬಲ ನೀಡಿದೆ. ಹೋರಾಟದ ಸ್ವರೂಪವನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ರೈತರಿಗೆ ಸರ್ಕಾರದಿಂದ ಅಥವಾ ಪೊಲೀಸರಿಂದ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಮೈಸೂರು ದಸರಾದಲ್ಲಿ ವಿದೇಶಿ ಗಣ್ಯರನ್ನು ಸ್ವಾಗತಿಸಿದ ಸಚಿವ ರಾಯರೆಡ್ಡಿ
ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ. ಇದೇ ತಿಂಗಳ 26ರಂದು ನಡೆಯುವ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.
ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳನ್ನೇ ಕೇಳಬೇಕು. ಅದರ ಬಗ್ಗೆ ಮಾತನಾಡಲು ನಮಗೆ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ಪೊಲೀಸ್ ಇಲಾಖೆ ಅವ್ರ ಮನೆ ಆಳಾ? – RSS ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
