ಇಸ್ಲಾಮಾಬಾದ್: 2008ರ ನವೆಂಬರ್ 26ರಂದು ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಎ-ತೈಬಾ ಉಗ್ರ ಸಂಘಟನೆ (Lashkar-e-Taiba) ಸಂಸ್ಥಾಪಕ ಹಫೀಜ್ ಸಯೀದ್ನನ್ನ (Hafiz Saeed) ಹಸ್ತಾಂತರಿಸಬೇಕು ಎಂದು ಭಾರತ ಕೇಳಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.
ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರೆ (Foreign Affairs spokesperson) ಮುಮ್ತಾಜ್ ಝಹ್ರಾ ಬಲೂಚ್ (Mumtaz Zahra Baloch) ಅವರು, ಹಫೀಜ್ ಸಯೀದ್ ಹಸ್ತಾಂತರಕ್ಕೆ ಭಾರತದ ಮನವಿ ಬಂದಿದೆ. ಆದರೆ, ಹಸ್ತಾಂತರಿಸಲು ಸಾಧ್ಯವಿಲ್ಲ, ಭಾರತ ಮತ್ತು ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕ್ ಚುನಾವಣೆ; ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಬೆಂಬಲಿತ ಪಕ್ಷದ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಿಂದ ಕಣಕ್ಕೆ
Advertisement
Advertisement
ಮುಮ್ತಾಜ್ ಝಹ್ರಾ ಬಲೂಚ್ ಅವರು ತಮ್ಮ ಹೇಳಿಕೆಯಲ್ಲಿ, ಹಫೀಜ್ ಸಯೀದ್ನನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಸ್ತಾಂತರಿಸುವಂತೆ ಪಾಕಿಸ್ತಾನವು ಭಾರತೀಯ ಅಧಿಕಾರಿಗಳಿಂದ ಮನವಿ ಸ್ವೀಕರಿಸಿದೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಗಮನಿಸುವುದು ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧಪೀಡಿತ ಗಾಜಾದಲ್ಲಿ 5 ಕಿಮೀ ನಡೆದು ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ
Advertisement
Advertisement
ಹಫೀಜ್ ಸಯೀದ್ನನ್ನು ಭಾರತಕ್ಕೆ ಹಸ್ತಾಂತರಿಸಿ ಎಂದು ಮೊದಲಿನಿಂದಲೂ ಕೇಂದ್ರ ಸರ್ಕಾರ ಆಗ್ರಹಿಸುತ್ತಿದೆ. ಉಗ್ರರಿಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ 2019ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್ನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆದ್ರೆ ಇದುವರೆಗೆ ಹಫೀಜ್ ಸಯೀದ್ಗೆ ವಿಧಿಸಿರುವ ಶಿಕ್ಷೆಯ ಪ್ರಮಾಣ ಯಾವುದು? ವಿಚಾರಣೆ ಯಾವ ಹಂತಕ್ಕೆ ಬಂದಿದೆ? ಆತ ಎಲ್ಲಿದ್ದಾನೆ ಎಂಬುದರ ಕುರಿತು ಪಾಕಿಸ್ತಾನ ಮಾಹಿತಿ ನೀಡಿಲ್ಲ ಎನ್ನಲಾಗುತ್ತದೆ. ಆದ್ರೆ ಕೆಲ ಮೂಲಗಳ ಪ್ರಕಾರ, ಹಫೀಜ್ ಸಯೀದ್ ಪಾಕಿಸ್ತಾನದ ಜೈಲಿನಲ್ಲಿಲ್ಲ. ಆತ ಅಡಗುತಾಣದಲ್ಲಿ ಸುರಕ್ಷಿತವಾಗಿದ್ದಾನೆ ಹಾಗೂ ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಎನ್ನಲಾಗಿದೆ. 2020ರ ಬಳಿಕ ಉಗ್ರರಿಗೆ ಹಣಕಾಸು ನೆರವು ಸೇರಿ ಐದು ಕೃತ್ಯಗಳಲ್ಲಿ ಅಪರಾಧಿ ಎಂದು ಸಾಬೀತಾದರೂ ಆತನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈಗ ಭಾರತವು ಆತನನ್ನು ಹಸ್ತಾಂತರಿಸಬೇಕು ಎಂದು ಆಗ್ರಹಿಸಿದೆ.
ಇತ್ತೀಚಿನ ಬೆಳವಣಿಗೆಯಲ್ಲಿ ಹಫೀಜ್ ಸಯೀದ್ ಬೆಂಬಲಿತ ಪಕ್ಷ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದಾಗಿ ತಿಳಿದುಬಂದಿದೆ.