ಶಿವಮೊಗ್ಗ: ಕಾಂಗ್ರೆಸ್ಗೆ (Congress) ಬಿಜೆಪಿಯ (BJP) ಯಾವ ಶಾಸಕರು ಕೂಡ ಹೋಗುವುದಿಲ್ಲ. ಕಾಂಗ್ರೆಸ್ನವರು ಸುಮ್ಮನೆ ಗುಲ್ ಎಬ್ಬಿಸಿದ್ದಾರೆ. ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಈ ವಿಷಯವನ್ನು ಮರೆಮಾಚಲು ಇದನ್ನು ಬೆಳಕಿಗೆ ತಂದಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (AragaJnanendra) ಹೇಳಿದರು.
Advertisement
ಶಿವಮೊಗ್ಗದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಇರುವ ಮಾಹಿತಿ ಪ್ರಕಾರ ಯಾವ ಶಾಸಕರು ಕಾಂಗ್ರೆಸ್ಗೆ ಹೋಗುವುದಿಲ್ಲ. ಗುತ್ತಿಗೆ ನೌಕರರಿಗೆ ಈ ಸರ್ಕಾರ ಬಂದ ಮೇಲೆ ವೇತನ ಸಹ ಕೊಟ್ಟಿಲ್ಲ ಎಂದು ಆರೋಪಿಸಿದರು ಎಂದರು. ಇದನ್ನೂ ಓದಿ: ಮಾನಸಿಕವಾಗಿ, ದೈಹಿಕವಾಗಿ ಬಿಜೆಪಿಯಲ್ಲಿದ್ದೇನೆ: ಎಸ್ಟಿ ಸೋಮಶೇಖರ್
Advertisement
Advertisement
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಜಲಾಶಯಗಳಲ್ಲಿ ನೀರಿಲ್ಲ, ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಇಲ್ಲ. ವಿದ್ಯುತ್ ಉತ್ಪಾದನೆಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದರು.
Advertisement
Web Stories