ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣೆ ಆಯೋಗದ ಅಧ್ಯಕ್ಷ ಓಂ ಪ್ರಕಾಶ್ ರಾವತ್ ಹೇಳಿದ್ದಾರೆ.
‘ಒಂದು ದೇಶ, ಒಂದೇ ಚುನಾವಣೆ’ ಎನ್ನುವ ಅಭಿಪ್ರಾಯವನ್ನು ಬಿಜೆಪಿ ವ್ಯಕ್ತಪಡಿಸಿತ್ತು. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಏಕಕಾಲದಲ್ಲಿ ನಡೆಯಬೇಕು ಎನ್ನುವುದು ಬಿಜೆಪಿಯ ಉದ್ದೇಶವಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಓಂ ಪ್ರಕಾಶ್, ಏಕಕಾಲದಲ್ಲಿ ಚುನಾವಣೆ ಸಾಧ್ಯವೇ ಇಲ್ಲ. ಅಲ್ಲದೆ ಇದಕ್ಕೆ ಕಾನೂನು ರಚನೆಯಾಗಬೇಕು ಎಂದಿದ್ದಾರೆ.
Advertisement
Advertisement
2019ರ ಏಪ್ರಿಲ್-ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಅದೇ ವೇಳೆ ಮಧ್ಯಪ್ರದೇಶ, ಛತ್ತೀಸ್‍ಘಡ, ರಾಜಸ್ಥಾನ ಮತ್ತು ಮಿಜೋರಂ ವಿಧಾನಸಭೆ ಚುನಾವಣೆ ಅವಧಿ ಬರುತ್ತದೆ. ಹೀಗಾಗಿ ಇದೇ ವರ್ಷದ ಅಂತ್ಯದಲ್ಲಿ ಈ ರಾಜ್ಯಗಳ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv