ಬೆಂಗಳೂರು: ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಇಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು. ಸದ್ಯ ನೈಟ್ ಕರ್ಫ್ಯೂ ಮುಂದುವರಿಯುತ್ತಿದ್ದು, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
Advertisement
ವೀಕೆಂಡ್ ಲಾಕ್ ಡೌನ್ ಬಗ್ಗೆ ಇಂದಿನ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ವೀಕೆಂಡ್ ಕರ್ಫ್ಯೂನಿಂದ ವಾಣಿಜ್ಯ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಕೊರೊನಾ ನೋಡಿಕೊಂಡು ಮುಂದೆ ತೀರ್ಮಾನಿಸೋಣ. ಕ್ಯಾಬಿನೆಟ್ ನಲ್ಲಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎಂದರು. ಇದನ್ನೂ ಓದಿ: ಕೊರೊನಾ ಜಾಗ್ರತೆ ವಹಿಸಿಕೊಂಡೇ ಮೇಕೆದಾಟು ಪಾದಯಾತ್ರೆ ಮಾಡ್ತೀವಿ: ಸಿದ್ದರಾಮಯ್ಯ
Advertisement
Advertisement
ಎರಡು ವಾರಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹೇರಲಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೆಲ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ರಾಜ್ಯದ ಎಲ್ಲಾ ಕಡೆ ಸರ್ಕಾರ ನಿಯಮ ಜಾರಿ ಮಾಡಬೇಕಾದ ಅವಶ್ಯಕತೆ ಇರಲಿಲ್ಲ ಎಂದು ಆಕ್ರೋಶ ಹೊರಬಿದ್ದಿತ್ತು. ಇದನ್ನೂ ಓದಿ: ಆರೂವರೆ ವರ್ಷ ಅಧಿಕಾರದಲ್ಲಿದ್ದಾಗ ಏನೂ ಮಾಡ್ಲಿಲ್ಲ, ಈಗ ಹೋರಾಟ ಮಾಡ್ತಿದ್ದಾರೆ: ಅರಗ ಜ್ಞಾನೇಂದ್ರ
Advertisement
ಇತ್ತ ಕಾಂಗ್ರೆಸ್ ನಾಯಕರು ಕೂಡ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಪಾದಯಾತ್ರೆ ಮಾಡುತ್ತೇವೆ ಎಂಬ ಉದ್ದೇಶದಿಂದಲೇ ಸರ್ಕಾರ ಹೊಸ ಕೊರೊನಾ ನಿಯಮ ಜಾರುಗೆ ತಂದಿದೆ ಎಂದು ಆರೋಪಿಸಿದ್ದರು. ಅಲ್ಲದೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಏನೇ ಆದರೂ, ಯಾರು ಬರದಿದ್ದರೂ ನಾವಿಬ್ಬರೇ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದರು.