ನವದೆಹಲಿ: ಮಣಿಪುರ ಹಿಂಸಾಚಾರ (Manipur Violence) ವಿಚಾರಕ್ಕೆ ಸಂಬಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟ INDIA ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯನ್ನು ಆಗಸ್ಟ್ 8ರಿಂದ 10ರವರೆಗೆ ನಡೆಸಲು ನಿರ್ಧರಿಸಿದೆ.
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ (No-Confidence Motion) ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10 ರಂದು ಉತ್ತರ ನೀಡಲಿದ್ದಾರೆ. ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಅವಿಶ್ವಾಸ ನಿರ್ಣಯ ಮಂಡಿಸಿದರು. ಸೋನಿಯಗಾಂಧಿ, ಫಾರೂಕ್ ಅಬ್ದುಲ್ಲಾ ಸೇರಿದಂತೆ ಐವತ್ತಕ್ಕೂ ಹೆಚ್ಚು ಸಂಸದರು ನಿರ್ಣಯಕ್ಕೆ ಬೆಂಬಲ ನೀಡಿದ್ದರು. ಇದನ್ನೂ ಓದಿ: ತರಕಾರಿ ಬೆಲೆ ಏರಿಕೆ – ಆಜಾದ್‌ಪುರ ಮಂಡಿ ತರಕಾರಿ ಮಾರುಕಟ್ಟೆಗೆ ರಾಗಾ ಭೇಟಿ
Advertisement
Advertisement
ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ದಿನಾಂಕ ನಿಗದಿ ಮಾಡಿರುವುದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ವಿರೋಧ ಪಕ್ಷಗಳ ಉಪಸ್ಥಿತಿಯಿಲ್ಲದೆ ಅವಿಶ್ವಾಸ ನಿರ್ಣಯ ಚರ್ಚೆಯ ದಿನಾಂಕ ಅಂತಿಮಗೊಳಿಸಲಾಗಿದೆ ಎಂದು ಆರೋಪಿಸಿವೆ. ಆಗಸ್ಟ್ 8ರಿಂದ 10ರ ಬದಲಿಗೆ ನಾಳೆಯೇ ಚರ್ಚೆ ನಡೆಯಬೇಕು ಎಂದು ಹಲವು ನಾಯಕರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: Commercial LPG Cylinder Price: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ
Advertisement
Web Stories