ನವದೆಹಲಿ: ಮಣಿಪುರ ಹಿಂಸಾಚಾರ (Manipur Violence) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮೋದಿ (Narendra Modi) ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿವೆ. ಕಾಂಗ್ರೆಸ್ (Congress) ಸಂಸದ ಗೌರವ್ ಗೊಗೊಯ್ ಅವರು ಲೋಕಸಭೆಯಲ್ಲಿ ಬುಧವಾರ ಅವಿಶ್ವಾಸ ನಿರ್ಣಯಕ್ಕೆ (No Confidence Motion) ನೋಟಿಸ್ ನೀಡಿದರು. ಇದಲ್ಲದೇ ತೆಲಂಗಾಣದ ಆಡಳಿತ ಪಕ್ಷ ಬಿಆರ್‌ಎಸ್ ಕೂಡ ಪ್ರತ್ಯೇಕ ಅವಿಶ್ವಾಸ ನಿರ್ಣಯ ಮಂಡಿಸಿದೆ.
ಸ್ಪೀಕರ್ ಓಂಬಿರ್ಲಾ ಈಗಾಗಲೇ ಅವಿಶ್ವಾಸ ನಿರ್ಣಯ ನೋಟಿಸ್ ಸ್ವೀಕರಿಸಿದ್ದು, ಶೀಘ್ರದಲ್ಲಿ ಚರ್ಚೆಗೆ ದಿನಾಂಕ ನಿಗದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮಣಿಪುರದ ಬಗ್ಗೆ ಹೇಗಾದರೂ ಮಾಡಿ ಪ್ರಧಾನಿಯಿಂದ ಮಾತನಾಡಿಸಬೇಕು ಎಂದು ನಿರ್ಧರಿಸಿರುವ ವಿಪಕ್ಷಗಳು ಕಡೆಯ ಅಸ್ತ್ರ ಎನ್ನುವಂತೆ ಅವಿಶ್ವಾಸ ನಿರ್ಣಯ ಮಂಡಿಸಿವೆ. ಆದರೆ ಇದಕ್ಕೆ ಪ್ರತ್ಯುತ್ತರ ನೀಡಲು ಸರ್ಕಾರವೂ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದನ್ನೂ ಓದಿ: ಹಿಂದಿನ ತಪ್ಪು ಮರೆಮಾಚಲು UPAಯಿಂದ INDIA ಅಂತ ಬದಲಾಯಿಸಿಕೊಂಡಿದ್ದಾರೆ: ಮೋದಿ ವಾಗ್ದಾಳಿ
Advertisement
Advertisement
ಮೂಲಗಳ ಪ್ರಕಾರ ಸರ್ಕಾರ ಮಣಿಪುರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಲು ಕಾಯುತ್ತಿದೆ. ಮಣಿಪುರ ನಿಯಂತ್ರಣಕ್ಕೆ ಬರುತ್ತಿದ್ದಂತೆ ಈ ಬಗ್ಗೆ ಸದನದಲ್ಲಿ ಮಾತನಾಡಬಹುದು ಎಂದು ಹಿರಿಯ ನಾಯಕರು ನಿರೀಕ್ಷೆ ಮಾಡಿದ್ದಾರೆ.
Advertisement
ತಮ್ಮ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರ ನೀಡಲಿದ್ದಾರೆ. ಇದರಲ್ಲಿ ಎರಡು ರೀತಿಯಲ್ಲಿ ಪ್ರತಿಪಕ್ಷಗಳನ್ನು ಟಾರ್ಗೆಟ್ ಮಾಡಬಹುದು ಎನ್ನಲಾಗುತ್ತಿದೆ. ಮೊದಲನೆಯದಾಗಿ ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಬಿಜೆಪಿಯೇತರ ರಾಜ್ಯಗಳ ಅಂಕಿ ಅಂಶಗಳು ಮತ್ತು ಘಟನೆಗಳನ್ನು ಉಲ್ಲೇಖಿಸಿ ಮತ್ತು ಎರಡನೆಯದಾಗಿ ಭ್ರಷ್ಟಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ. ಮಣಿಪುರದ ಹಿಂಸಾಚಾರವನ್ನು ಪ್ರಸ್ತಾಪಿಸಿ ಅದಕ್ಕಿಂತ ಹೆಚ್ಚು, ಕಾಂಗ್ರೆಸ್ ಆಡಳಿತದಲ್ಲಿ ನಡೆದ ಪ್ರಮುಖ ಘಟನೆಗಳನ್ನು ಉಲ್ಲೇಖಿಸಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಬುಧವಾರ ತೀರ್ಮಾನ ಆಗಲಿಲ್ಲ ಯಾಕೆ?
Advertisement
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಪ್ರಸ್ತುತ ಲೋಕಸಭೆಯಲ್ಲಿ 330 ಸಂಸದರ ಬೆಂಬಲವನ್ನು ಹೊಂದಿದೆ. ಬಿಜೆಪಿ ಒಂದೇ 301 ಸಂಸದರನ್ನು ಹೊಂದಿದೆ. ವಿರೋಧ ಪಾಳಯ ಅಂದರೆ ಭಾರತ ಒಕ್ಕೂಟವು ಲೋಕಸಭೆಯಲ್ಲಿ 142 ಮತ್ತು ರಾಜ್ಯಸಭೆಯಲ್ಲಿ 96 ಸಂಸದರನ್ನು ಹೊಂದಿದೆ. ಸಂಖ್ಯಾಬಲದ ದೃಷ್ಟಿಯಿಂದ ಉಭಯ ಸದನಗಳಲ್ಲಿ ಆಡಳಿತ ಪಕ್ಷ ಬಲಿಷ್ಠವಾಗಿದೆ. ಸರ್ಕಾರಕ್ಕೆ ಯಾವುದೇ ಅಪಾಯಗಳಿಲ್ಲ.
ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ನಿಯಮವೂ ಇದೆ. ಇದನ್ನು ನಿಯಮ 198 ರ ಅಡಿಯಲ್ಲಿ ಲೋಕಸಭೆಯಲ್ಲಿ ಪರಿಚಯಿಸಲಾಗಿದೆ. ಸಂಸತ್ತಿನಲ್ಲಿ ಈ ಅವಿಶ್ವಾಸ ನಿರ್ಣಯ ಮಂಡಿಸಲು ಸುಮಾರು 50 ಸಂಸದರ ಅಗತ್ಯವಿದೆ. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಮತದಾನದ ಸಮಯದಲ್ಲಿ, ಶೇಕಡಾ 51 ಕ್ಕಿಂತ ಹೆಚ್ಚು ಸಂಸದರು ಅದರ ಪರವಾಗಿ ಮತ ಚಲಾಯಿಸಿದರೆ, ಆಗ ಸರ್ಕಾರಕ್ಕೆ ತೊಂದರೆಯಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಬಹುಮತ ಸಾಬೀತು ಪಡಿಸಬೇಕಿದೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ
Web Stories