ನವದೆಹಲಿ: ನಾವು ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನೇ ಬಯಸುತ್ತೇವೆ. ಆದರೆ ಇದರ ಅರ್ಥ ಭಯೋತ್ಪಾದನೆಯನ್ನು (Terrorism) ಕ್ಷಮಿಸುತ್ತೇವೆ ಎಂದಲ್ಲ. ಭಯೋತ್ಪಾದನೆಯಿಂದ ಭಾರತ (India) ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಹೇಳಿಕೆ ನೀಡಿದ್ದಾರೆ.
ಶುಕ್ರವಾರ ಜೈಶಂಕರ್ ಅವರು ಸೈಪ್ರಸ್‌ಗೆ (Cyprus) ಭೇಟಿ ನೀಡಿದ್ದು, ಅಲ್ಲಿನ ಭಾಷಣದ ವೇಳೆ ಅವರು ನೆರೆಯ ಪಾಕಿಸ್ತಾನ (Pakistan) ಹಾಗೂ ಚೀನಾ (China) ದೇಶಗಳಿಗೆ ತಿರುಗೇಟು ನಿಡಿದ್ದಾರೆ. ನಮ್ಮ ನೆರೆಯ ದೇಶಗಳೊಂದಿಗೆ ಒಳ್ಳೆಯ ಸಂಬಂಧ ಬಯಸಿದರೂ ನಮ್ಮ ಮೇಲಾಗಿರುವ ಭಯೋತ್ಪಾದನೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಈ ವಿಷಯದ ಬಗ್ಗೆ ಯಾವುದೇ ರಾಜಿಯಿಲ್ಲ ಎಂದು ಒತ್ತಿ ಹೇಳಿದರು.
Advertisement
Advertisement
ಚೀನಾದೊಂದಿಗಿನ ಗಡಿ ಸಮಸ್ಯೆಗಳ ಕುರಿತು ಮಾತನಾಡಿದ ಜೈಶಂಕರ್, ಕೋವಿಡ್ ಸಮಯದಲ್ಲಿ ಸವಾಲುಗಳು ತೀವ್ರಗೊಂಡಿವೆ. ಚೀನಾದೊಂದಿಗಿನ ನಮ್ಮ ಸಂಬಂಧಗಳು ಸಾಮಾನ್ಯವಾಗಿಲ್ಲ. ಅರುಣಾಚಲದ ತವಾಂಗ್ ಸೆಕ್ಟರ್‌ನಲ್ಲಿ ಚೀನಾ ಮತ್ತು ಭಾರತೀಯ ಸೈನಿಕರು ಘರ್ಷಣೆ ನಡೆಸಿದ ದಿನಗಳ ಬಳಿಕ ನಮ್ಮ ಗಡಿಯಲ್ಲಿ ನಮಗೆ ಸವಾಲುಗಳಿವೆ. ಅದು ಕೋವಿಡ್ ಸಮಯದಲ್ಲಿ ತೀವ್ರಗೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್ ಬಿಚ್ಚಿಟ್ಟ ಸತ್ಯ
Advertisement
ಚೀನಾದೊಂದಿಗಿನ ಸಂಬಂಧಗಳು ಸಾಮಾನ್ಯವಾಗಿಲ್ಲ ಏಕೆಂದರೆ ಎಲ್‌ಎಸಿ ಪ್ರದೇಶವನ್ನು ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದರು.
Advertisement
साइप्रस में भारतीय समुदाय के साथ अच्छी मुलाक़ात।
प्रवास के दौरान हुए आधिकारिक agreements के विषय में बात की । भारत-साइप्रस के मध्य finance, shipping, IT, services, mobility और राजनीतिक cooperation की संभावनाओं के बारे में भी चर्चा की। pic.twitter.com/ihOgdZ56fi
— Dr. S. Jaishankar (@DrSJaishankar) December 30, 2022
ಭಾರತ ಹಾಗೂ ಸೈಪ್ರಸ್ ದೇಶಗಳು ರಾಜತಾಂತ್ರಿಕ ಸಂಬಂಧಗಳ 60 ನೇ ವರ್ಷವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಜೈಶಂಕರ್ ಸೈಪ್ರಸ್‌ಗೆ ಭೇಟಿ ನೀಡಿದ್ದಾರೆ. ಅವರ ಭೇಟಿಯ ಸಮಯದಲ್ಲಿ, ಸೈಪ್ರಿಯೋಟ್ ಕೌಂಟರ್ಪಾರ್ಟ್ ಕಸೌಲಿಡೆಸ್ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ರಕ್ಷಣಾ ಮತ್ತು ಮಿಲಿಟರಿ ಸಹಕಾರದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದನ್ನೂ ಓದಿ: ತಿರುಪತಿ ಗರ್ಭಗುಡಿ 8 ತಿಂಗಳು ಬಂದ್ ಇಲ್ಲ – ಮುಖ್ಯ ಅರ್ಚಕರ ಸ್ಪಷನೆ