ಬೆಂಗಳೂರು: ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ.
Advertisement
ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ. ಇದನ್ನೂ ಓದಿ: ಕಂಗೆಟ್ಟ ಶ್ರೀಲಂಕಾಕ್ಕೆ ಎಲ್‌ಟಿಟಿಇ ದಾಳಿಯ ಭೀತಿ – ಹೈ ಅಲರ್ಟ್
Advertisement
Advertisement
ಈ ಎಲ್ಲದರ ಮಧ್ಯೆ ಶಾಲೆಗಳ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಈ ಬಾರಿಯೂ ರಾಜ್ಯದ ಮಕ್ಕಳಿಗೆ ಸೈಕಲ್ ಭಾಗ್ಯ ಇಲ್ಲ. ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಕುಂಟು ನೆಪವನ್ನು ಹೇಳುತ್ತಿದೆ.
Advertisement
ಬಜೆಟ್‍ನಲ್ಲಿ ಅನುದಾನ ಮೀಸಲಿಡದ ಕಾರಣ 2022-23ನೇ ಸಾಲಿನ ಮಕ್ಕಳಿಗೆ ಸೈಕಲ್ ವಿತರಿಸುತ್ತಿಲ್ಲ. ಆರ್ಥಿಕ ಕೊರತೆಯ ನೆಪವೊಡ್ಡಿ ಸೈಕಲ್ ಯೋಜನೆಗೆ ಸರ್ಕಾರ ಬ್ರೇಕ್ ಹಾಕಿದೆ. ಸೈಕಲ್ ವಿತರಿಸಲು ಕುಂಟು ನೆಪ ಹೇಳುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ
ಈ ಕುರಿತಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಈ ಬಾರಿ ನಾವು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ. ಅಕ್ಟೋಬರ್‌ನಲ್ಲಿ ನೇಮಿಸಲಾಗುವ ಅತಿಥಿ ಶಿಕ್ಷಕರನ್ನು ಈಗಿನಿಂದಲೇ ತೆಗೆದುಕೊಳ್ಳುತ್ತಿದ್ದೇವೆ. ಅದರಲ್ಲೂ ಈ ಬಾರಿ ೧೫,೦೦ ಶಿಕ್ಷಕರನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.