Bengaluru City

ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ: ಸುನೀಲ್ ಕುಮಾರ್

Published

on

Share this

– ರಾಜ್ಯದ ಮೂರು ಉಷ್ಣ ವಿದ್ಯುತ್ ಸ್ಥಾವರಗಳಿಂದ ಒಟ್ಟಾರೆ 5020 ಮೆ.ವ್ಯಾ ಉತ್ಪಾದನೆ

ಬೆಂಗಳೂರು: ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆಗೆ ಯಾವುದೇ ವ್ಯತ್ಯಾಸವಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು.

ಕಲ್ಲಿದ್ದಲು ಕೊರತೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲ್ ಇಂಡಿಯಾ ಲಿಮಿಟೆಡ್ ಹಾಗೂ ಎಸ್.ಸಿ.ಸಿ.ಎಲ್‍ನಿಂದ ದಿನಂಪ್ರತಿ 12-13 ರೇಕ್ ಕಲ್ಲಿದ್ದಲು ಪೂರೈಕೆ ಆಗುತ್ತಿದೆ. ಬೇಡಿಕೆ ಸಹ ಪೂರೈಸಲು ಸಾಧ್ಯವಾಗಿದೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲ ಕೊರತೆಯಿಂದಾಗಿ ಯಾವುದೇ ಸಮಸ್ಯೆಯಾಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ಲಸಿಕೆ ಪಡೆಯದೇ ಓಡಾಟ ನಡೆಸುವವರ ಮೇಲೆ ನಿಗಾ

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟಿಡ್ ನಿಂದ ಮೂರು ವಿದ್ಯುತ್ ಸ್ಥಾವರಗಳಾದ ರಾಯಚೂರು, ಬಳ್ಳಾರಿ ಹಾಗೂ ಯರಮರಸ್ ಉಷ್ಣ ವಿದ್ಯುತ್ ಸ್ಥಾವರಗಳು ಕಾರ್ಯ ನಿರ್ವಹಿಸುತ್ತಿದೆ. ಈ ಪೈಕಿ ರಾಯಚೂರು ಉಷ್ಣ ವಿದ್ಯುತ್ ಸ್ಥಾವರದಲ್ಲಿ 8 ಘಟಕಗಳಿದ್ದು, 1720 ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಶಕ್ತಿ ಹೊಂದಿದೆ. ಬಳ್ಳಾರಿ ಸ್ಥಾವರದ 3 ಘಟಕಗಳಲ್ಲಿ 1700 ಮೆ.ವ್ಯಾ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಇನ್ನು ಯರಮರಸ್ ಸ್ಥಾವರದ 2 ಘಟಕಗಳು 1,600 ಮೆ.ವ್ಯಾ ವಿದ್ಯುತ್ ಉತ್ಪಾದನಾ ಶಕ್ತಿ ಹೊಂದಿದೆ ಎಂದರು.

ಒಟ್ಟಾರೆ 3 ಸ್ಥಾವರಗಳ 13 ಘಟಕಗಳ ಒಟ್ಟು ಉತ್ಪಾದನೆ 5,020 ಮೆ.ವ್ಯಾಗಳಾಗಿದ್ದು, ಈ 13 ಘಟಕಗಳ ಪೈಕಿ 8 ಘಟಕಗಳು ಕಾರ್ಯಾ ನಡೆಸುತ್ತಿದೆ. ಇನ್ನುಳಿದ 5 ಘಟಕಗಳು ಬೇಡಿಕೆ ಕಡಿಮೆ ಇರುವ ಕಾರಣದಿಂದ ಸ್ಥಬ್ಧವಾಗಿದೆ ಎಂದು ತಿಳಿಸಿದರು.

ದಿನಂಪ್ರತಿ ಕರ್ನಾಟಕ ಪವರ್ ಕಾರ್ಪೊರೇಷನ್  ಲಿಮಿಟಿಡ್(ಕೆಪಿಸಿಎಲ್) 12-13 ರೇಕ್(1 ರೇಕ್‍ನಲ್ಲಿ 3,500 ಟನ್ ಕಲ್ಲಿದ್ದಲು) ಸ್ವೀಕರಿಸುತ್ತಿದ್ದು, ಕರ್ನಾಟಕದಲ್ಲಿ ವಿದ್ಯುತ್ ನ ಅಭಾವ ಆಗದಂತೆ ಗಮನ ಹರಿಸಲಾಗಿದೆ. ಇನ್ನುಳಿದಂತೆ ರಾಜ್ಯದ ಒಟ್ಟಾರೆ ಬೇಡಿಕೆ ಹಾಗೂ ಪೂರೈಕೆಯ ಅಂಕಿ ಅಂಶದಂತೆ, ಬೇಡಿಕೆಗಿಂತ ಪೂರೈಕೆ ಹೆಚ್ಚಿದ್ದು ರಾಜ್ಯದ ಜನರು ವಿದ್ಯುತ್ ಪೂರೈಕೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಟಿಪ್ಪು ಇಲ್ಲದ ಮೈಸೂರು ದಸರಾ, ಸರ್ಕಾರದಿಂದ ಕೋಮುವಾದಿ ನಡೆ – ಪಿಎಫ್‍ಐ ಕಿಡಿ

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications