ಮೈಸೂರು: ಮಹದೇವಪ್ಪ (HC Mahadevappa) ಮನೆಯಲ್ಲಿ ಡಿನ್ನರ್ ಮೀಟಿಂಗ್ (Dinner Meeting) ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಮನೆಯಲ್ಲಿ ಡಿನ್ನರ್ ಏರ್ಪಾಡು ಮಾಡಲಾಗಿತ್ತು. ಊಟಕ್ಕೆ ಹೋಗಿದ್ದೆವು. ಯಾವ ಮೀಟಿಂಗ್ ಇಲ್ಲ, ಡಿನ್ನರ್ ಅಷ್ಟೇ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತಾ? ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಸಹಜವಾಗಿ ಊಟಕ್ಕೆ ಸೇರಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: BBMP ವ್ಯಾಪ್ತಿಯ 110 ಹಳ್ಳಿ ನಿವಾಸಿಗಳಿಗೆ ಗುಡ್‌ನ್ಯೂಸ್; ದಸರಾ ಮುಗಿದ ಬೆನ್ನಲ್ಲೇ ಹರಿಯಲಿದೆ ಕಾವೇರಿ
Advertisement
Advertisement
ಡಿನ್ನರ್‌ನಲ್ಲಿ ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಶಾಸಕ ಎ.ಆರ್ ಕೃಷ್ಣ ಮೂರ್ತಿ ಭಾಗಿಯಾಗಿದ್ದೆವು. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಊಟದ ವೇಳೆ ಸಿಎಂ ಬದಲಾವಣೆ ಅದು ಇದು ಯಾವ ವಿಚಾರವೂ ಚರ್ಚೆ ಮಾಡಿಲ್ಲ. ವಿರೋಧ ಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ. ಕಾಂಗ್ರೆಸ್‌ನಲ್ಲಿ ಯಾವ ಬದಲಾವಣೆ ಬಗ್ಗೆಯೂ ಚರ್ಚೆ ಆಗಿಲ್ಲ ಎಂದರು. ಇದನ್ನೂ ಓದಿ: `ಅಹಿಂದ’ ನಾಯಕರ ಡಿನ್ನರ್ ಮೀಟಿಂಗ್ – ರಾಜ್ಯ ರಾಜಕೀಯದಲ್ಲಿ ಸಂಚಲನ
Advertisement
Advertisement
ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ನಾವು ಆಗಾಗ ಈ ರೀತಿ ಸೇರುತ್ತಿರುತ್ತೇವೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು. ದಲಿತ ಸಿಎಂ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿ, ಸದ್ಯ ಈ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೋಲಾರ| ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ತಾಯಿ, ಮಗ ಸಾವು