ಯಾವ ಔಷಧಿ ಕಂಪನಿಯೂ ನನಗೆ ಹಣ ನೀಡಿಲ್ಲ: ಜಾಗೃತಿಗಾಗಿ ಡ್ರಾಮಾ ಮಾಡಿದೆ ಎಂದ ಪೂನಂ

Public TV
2 Min Read
Poonam Pandey 3

ರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

poonam pandey 1

ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

poonam pandey 3 1

ಆರ್.ಜಿವಿ ಮೆಚ್ಚುಗೆ

ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮಾತ್ರ ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Poonam Pandey 2

ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.

poonam pandey

ಪೂನಂ ವಿರುದ್ಧ ಕ್ರಮಕ್ಕೆ ಒತ್ತಾಯ

ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್‌ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.

ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್‌ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್‌ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

Share This Article