ಚಿಕ್ಕಮಗಳೂರು: ಮರಣ ಮೃದಂಗ ಬಾರಿಸುತ್ತಿರುವ ಮಂಗನಜ್ವರಕ್ಕೆ ಮಲೆನಾಡಿಗರು ತತ್ತರಿಸಿ ಹೋಗಿದ್ದು, ಈ ಕಾಯಿಲೆ ಇಲ್ಲಿಗೆ ಬರುವ ಪ್ರವಾಸಿಗರಿಗೂ ತಗಲುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಪ್ರೇಕ್ಷಣೀಯ ಸ್ಥಳಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.
ಮಲೆನಾಡು ಹಾಗೂ ಸುತ್ತಮುತ್ತಲ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿರೋ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್‍ಡಿ) ವೈರಾಣುವಿನಿಂದ ಅನೇಕ ಮಂದಿ ಮೃತಪಟ್ಟಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಈ ಕಾಯಿಲೆ ಈ ಭಾಗಕ್ಕೆ ಬರುವ ಪ್ರವಾಸಿಗರಿಗೂ ತಗಲಬಾರದೆಂದು ಮುಂಜಾಗೃತೆ ಕ್ರಮವಾಗಿ ಪ್ರವಾಸಿಗರಿಗೆ ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಕುದುರೆಮುಖಕ್ಕೆ ಒಳಪಡುವ ಹಲವು ಪ್ರದೇಶಗಳಲ್ಲಿ ಟ್ರಕ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ
Advertisement
Advertisement
ಮಂಗನ ಕಾಯಿಲೆ ಹಿನ್ನೆಲೆಯಲ್ಲಿ ಗಣನೀಯವಾಗಿ ಪ್ರವಾಸಿಗರ ಸಂಖ್ಯೆ ಇಳಿಮುಖಗೊಂಡಿದೆ. ಪ್ರವಾಸಿಗರ ಚಾರಣಕ್ಕೆ ಅರಣ್ಯ ಇಲಾಖೆಯಿಂದ ನಿಷೇಧ ಹೇರಿದೆ. ಈ ಭಾಗದಲ್ಲಿ ಕೆ.ಎಫ್.ಡಿ ವೈರಾಣು ಪತ್ತೆ ಹಿನ್ನೆಲೆ ಕುದುರೆಮುಖ ಗಿರಿಶ್ರೇಣಿ, ಕೂಡಲ್ ಫಾಲ್ಸ್, ಕೊಡಚಾದ್ರಿ, ಕುರೆಂಜಲ್ ಗಿರಿಶ್ರೇಣಿ ಪ್ರದೇಶಗಳಿಗೆ ಪ್ರವಾಸಿಗರು ಪ್ರವೇಶಿಸಬಾರದೆಂದು ಅರಣ್ಯ ಇಲಾಖೆ ಸೂಚನೆ ನೀಡಿದೆ.
Advertisement
Advertisement
ಅಷ್ಟೇ ಅಲ್ಲದೆ ಕಾರ್ಕಳಕ್ಕೆ ಒಳಪಡುವ ಪ್ರದೇಶದಲ್ಲೂ ಟ್ರಕ್ಕಿಂಗ್ ನಿಷೇಧಿಸಲಾಗಿದೆ. ಕಾರ್ಕಳ ಹಾಗೂ ಚಿಕ್ಕಮಗಳೂರು, ಕುದುರೆಮುಖ ವ್ಯಾಪ್ತಿಯಲ್ಲಿ ಕೆಎಫ್‍ಡಿ ಭೀತಿ ಹೆಚ್ಚಾಗಿದ್ದು, ಮುಂಜಾಗೃತೆ ಕ್ರಮವಾಗಿ ಅರಣ್ಯ ಇಲಾಖೆ ಮಲೆನಾಡಿಗೆ ಬರೋ ಪ್ರವಾಸಿಗರಿಗೆ ಹಾಗೂ ಜನರಿಗೆ ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv