ಮುಂಬೈ: ಇನ್ನು ಮುಂದೆ ಐಪಿಎಲ್ ಕ್ರಿಕೆಟ್ (IPL Cricket) ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ (Jio Cinema) ಉಚಿತವಾಗಿ ವೀಕ್ಷಣೆ ಮಾಡಲು ಸಾಧ್ಯವಿಲ್ಲ.
ಕಳೆದ ಎರಡು ವರ್ಷಗಳಿಂದ ಜಿಯೋ ಸಿನಿಮಾದಲ್ಲಿ ಐಪಿಎಲ್ ಪಂದ್ಯಗಳನ್ನು ವೀಕ್ಷಣೆ ಮಾಡಬಹುದಾಗಿತ್ತು. ಆದರೆ ಇನ್ನು ಮುಂದೆ ಜಿಯೋ ಹಾಟ್‌ಸ್ಟಾರ್ (Jio Hotstar) ಆಪ್‌ನಲ್ಲಿ ಹಣ ಪಾವತಿಸಿ ಎಲ್ಲಾ ಲೈವ್ ಸ್ಟ್ರೀಮ್‌ಗಳನ್ನು ನೋಡಬಹುದು.
Advertisement
ಡಿಸ್ನಿ-ರಿಲಯನ್ಸ್ (Disney Reliance Joint Venture) ವಿಲೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಜಿಯೋ ಸಿನಿಮಾ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ವಿಲೀನಗೊಂಡು ಜಿಯೋಸ್ಟಾರ್ ಆಗಿ ಬದಲಾಗಿದ್ದು ಶುಕ್ರವಾರ ಹೊಸ ಸ್ಟ್ರೀಮಿಂಗ್ ಅಪ್ಲಿಕೇಶನನ್ನು ಬಿಡುಗಡೆ ಮಾಡಲಾಗಿದೆ.
Advertisement
ಮಾಧ್ಯಮಗಳಲ್ಲಿ ಬಂದಿರುವ ವರದಿ ಪ್ರಕಾರ ಲೈವ್‌ಸ್ಟ್ರೀಮ್ ಆರಂಭಗೊಂಡ ಕೆಲ ನಿಮಿಷ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ. ಈ ಉಚಿತ ನಿಮಿಷಗಳು ಕೊನೆಗೊಂಡ ನಂತರ ಚಂದಾದಾರಿಕೆಯ ಆರಂಭಿಕ ಬೆಲೆ 149 ರೂ. ಆಗಿರುವ ಪುಟ ಕಾಣಿಸಲಿದೆ. ಈ ಹಿಂದೆಯೂ ಹಾಟ್‌ಸ್ಟಾರ್ ಬಳಕೆದಾರರಿಗೆ ಇದೇ ರೀತಿಯ ಆಫರ್ ನೀಡಿತ್ತು. ಇದನ್ನೂ ಓದಿ: Champions Trophy | ವಿಜೇತ ತಂಡಕ್ಕೆ ಸಿಗಲಿದೆ 19.45 ಕೋಟಿ – ಗೆದ್ದ ಪ್ರತಿ ಪಂದ್ಯಕ್ಕೂ ಸಿಗುತ್ತೆ ಹಣ
Advertisement
Advertisement
ಈಗಲೂ ಪ್ರವೇಶಿಸಬಹುದು:
ಡಿಸ್ನಿ+ ಹಾಟ್‌ಸ್ಟಾರ್ ಮತ್ತು ಜಿಯೋಸಿನಿಮಾ ಎರಡನ್ನೂ ಸಬ್‌ಸ್ಕ್ರೈಬ್ ಮಾಡಿದ ಚಂದಾದಾರರು ತಮ್ಮ ಯೋಜನೆಗಳು ಮತ್ತು ಪ್ರಯೋಜನಗಳನ್ನು ಈಗಲೂ ಪಡೆದುಕೊಳ್ಳಬಹುದು. ಜಿಯೋ ಸಿನಿಮಾ ಸಬ್‌ಸ್ಕ್ರೈಬ್ ಮಾಡಿದ ಚಂದದಾರರು ಈಗಲೂ ಆಪ್ ಪ್ರವೇಶಿಸಬಹುದು. ಆದರೆ ಕಂಟೆಂಟ್ ಜಿಯೋಹಾಟ್‌ಸ್ಟಾರ್‌ನಲ್ಲಿ ಪ್ಲೇ ಆಗುತ್ತದೆ. ಸಕ್ರಿಯ ಜಿಯೋಸಿನಿಮಾ ಚಂದಾದಾರಿಕೆಗಳನ್ನು ಹೊಂದಿರುವವರು ತಮ್ಮ ಯೋಜನೆಯ ಅವಧಿ ಮುಗಿಯುವವರೆಗೆ ಕಾಯಬೇಕು ಅಥವಾ ಹೊಸ ಪ್ಲಾಟ್‌ಫಾರ್ಮ್‌ಗೆ ಬದಲಾಯಿಸಬೇಕು. ಹೀಗಾಗಿ ಈಗಾಗಲೇ ಚಂದಾದಾರರಾಗಿರುವ ಬಳಕೆದಾರರು ತಮ್ಮ ಚಂದಾದಾರಿಕೆಗಳನ್ನು ಕಳೆದುಕೊಳ್ಳುವುದಿಲ್ಲ ಮತ್ತು ಅವರ ಆಯಾ ಪ್ಲ್ಯಾನ್ ಮುಗಿಯವರೆಗೂ ಜಿಯೋಹಾಟ್‌ಸ್ಟಾರ್ ಅನ್ನು ಉಚಿತವಾಗಿ ಪ್ರವೇಶಿಸಲು ಸಾಧ್ಯವಾಗುತ್ತದೆ. ಇದನ್ನೂ ಓದಿ: UnSold ಪ್ಲೇಯರ್, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?
ಭಾರೀ ಮೊತ್ತಕ್ಕೆ ಖರೀದಿ:
2017-22ರ ಅವಧಿಯ ಐಪಿಎಲ್ ಟಿವಿ ಮತ್ತು ಡಿಜಿಟಲ್ ರೈಟ್ಸ್ ಅನ್ನು ಡಿಸ್ನಿ ಹಾಟ್‌ಸ್ಟಾರ್ 16,347 ಕೋಟಿ ರೂ. ನೀಡಿ ಪಡೆದುಕೊಂಡಿತ್ತು. 2023ರಲ್ಲಿ ಟಿವಿ ಮತ್ತು ಡಿಜಿಟಲ್ ರೈಟ್ಸ್ ವಿಂಗಡನೆ ಮಾಡಲಾಗಿತ್ತು. 2023-27ರ 410 ಪಂದ್ಯಗಳಿಗೆ ಡಿಜಿಟಲ್ ಹಕ್ಕುಗಳನ್ನು 23,758 ಕೋಟಿ ರೂ.ಗೆ ವಯಾಕಾಮ್ 18 ಪಡೆದುಕೊಂಡಿದ್ದರೆ, ಟಿವಿ ಹಕ್ಕುಗಳನ್ನು ವಾಲ್ಟ್ ಡಿಸ್ನಿ ಕಂಪನಿ 23,575 ಕೋಟಿ ರೂ. ನೀಡಿ ಖರೀದಿಸಿತ್ತು.
ಯಾರ ಬಳಿ ಯಾವ ಹಕ್ಕು?
ರಿಲಯನ್ಸ್ ಜಿಯೋ ಸಿನಿಮಾ ಐಪಿಎಲ್ ಕ್ರಿಕೆಟ್, ಚಳಿಗಾಲದ ಒಲಿಂಪಿಕ್ಸ್, ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್ ಹಕ್ಕು ಹೊಂದಿದೆ. ಡಿಸ್ನಿ ಹಾಟ್‌ಸ್ಟಾರ್ ಐಸಿಸಿ ಆಯೋಜಿಸುವ ಕ್ರಿಕೆಟ್ ಪಂದ್ಯಗಳು, ಇಂಗ್ಲಿಷ್ ಪ್ರೀಮಿಯರ್ ಲೀಗ್, ದೇಶೀಯ ಪ್ರೊ ಕಬಡ್ಡಿ ಲೀಗ್‌ನ ಹಕ್ಕುಗಳನ್ನು ಹೊಂದಿದೆ. ವಿಲೀನಗೊಂಡ ಬಳಿಕ ಎಲ್ಲಾ ಕ್ರೀಡೆಗಳನ್ನು ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.
ಹಾಟ್‌ಸ್ಟಾರ್‌ನಲ್ಲಿ ಐಪಿಎಲ್ ಕ್ರಿಕೆಟ್ ವೀಕ್ಷಿಸಬೇಕಾದರೆ ಸಬ್‌ಸ್ಕ್ರೈಬ್ ಆಗಬೇಕಿತ್ತು. ಆದರೆ 2023 ರಲ್ಲಿ ಜಿಯೋ ರೈಟ್ಸ್ ಪಡೆದ ನಂತರ ಐಪಿಎಲ್ ಲೈವ್ ಸ್ಟ್ರೀಮಿಂಗ್ ಉಚಿತವಾಗಿ ನೀಡಿತ್ತು. ಇದರಿಂದಾಗಿ ಐಪಿಎಲ್ ವೀಕ್ಷಕರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಇದನ್ನೂ ಓದಿ: ಡ್ಯಾಂಡ್ರಫ್ ಜಾಹೀರಾತಿನಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರುಷ್ಕಾ! – ಇಬ್ಬರ ಲವ್ ಸ್ಟೋರಿಯನ್ನು ನೀವು ಓದಲೇಬೇಕು
ಜಂಟಿ ಉದ್ಯಮಕ್ಕೆ ಸಹಿ:
2024ರ ಫೆಬ್ರವರಿಯಲ್ಲಿ ವಯಾಕಾಮ್ 18 ಮೀಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ವಾಲ್ಟ್ ಡಿಸ್ನಿ ಕಂಪನಿ 70 ಸಾವಿರ ಕೋಟಿ ರೂ. ಮೊತ್ತದ ಜಂಟಿ ಉದ್ಯಮಕ್ಕೆ ಸಹಿ ಹಾಕಿದ್ದವು. ಈ ವಹಿವಾಟಿನ ಭಾಗವಾಗಿ ವಯಾಕಾಮ್ 18ಕ್ಕೆ ಸೇರಿದ ಮಾಧ್ಯಮ ಸಂಸ್ಥೆಗಳನ್ನು ಕೋರ್ಟ್ ಅನುಮೋದಿತ ವ್ಯವಸ್ಥೆ ಮೂಲಕ ಸ್ಟಾರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್‌ನಲ್ಲಿ ವಿಲೀನಗೊಳಿಸಲು ಅನುಮತಿ ಸಿಕ್ಕಿತ್ತು.
ರಿಲಯನ್ಸ್ ಇಂಡಸ್ಟ್ರೀಸ್, ವಯಾಕಾಮ್ 18 ಮೀಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ವಾಲ್ಟ್ ಡಿಸ್ನಿ ಕಂಪನಿಯ ವಿಲೀನದ ಭಾಗವಾಗಿ ಪರವಾನಗಿಯನ್ನು ಸ್ಟಾರ್ ಇಂಡಿಯಾಗೆ ವರ್ಗಾಯಿಸಲು ಕೇಂದ್ರ ಸರ್ಕಾರ ಸೆಪ್ಟೆಂಬರ್ 27 ರಂದು ಅನುಮೋದನೆ ನೀಡಿತ್ತು. ಪರವಾನಗಿ ಹಸ್ತಾಂತರಕ್ಕೆ ಅನುಮೋದನೆ ನೀಡಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇದು ಭಾರತೀಯ ಸ್ಪರ್ಧಾತ್ಮಕ ಆಯೋಗವು (CCI) ವಿಧಿಸಿದ ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ತಿಳಿಸಿತ್ತು.
ಡಿಸ್ನಿ ಮತ್ತು ರಿಲಯನ್ಸ್ ನಡುವಿನ ವಿಲೀನ ಒಪ್ಪಂದದಿಂದಾಗಿ 120 ಟಿವಿ ಚಾನೆಲ್‌ಗಳು ಮತ್ತು ಎರಡು ಸ್ಟ್ರೀಮಿಂಗ್ ಅಪ್ಲಿಕೇಶನ್‌ಗಳೊಂದಿಗೆ ಭಾರತದ ಅತಿದೊಡ್ಡ ಮನರಂಜನಾ ಕಂಪನಿಯಾಗಿ ಹೊರಹೊಮ್ಮಿದೆ.