ಬೆಂಗಳೂರು: ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡದೇ ಇರಲು ಸರ್ಕಾರ ಮುಂದಾಗಿದೆ.
ಪ್ರಥಮ ದರ್ಜೆ ಕಾಲೇಜು, ವೈದ್ಯಕೀಯ ಕಾಲೇಜು, ತಾಂತ್ರಿಕ ಶಿಕ್ಷಣ ಕಾಲೇಜು, ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದ ಸಮಿತಿಯ ಕೊಠಡಿಯಲ್ಲಿ ಸಭೆ ನಡೆಯಿತು.
Advertisement
ಸಭೆಯ ಬಳಿಕ ಮಾತನಾಡಿದ ಎಚ್‍ಡಿಕೆ, ಉಚಿತ ಬಸ್ ಪಾಸ್ ನೀಡುವ ಸಂಬಂಧ ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಪಾಸ್ ನೀಡಿದ್ರೆ ಎಷ್ಟು ಹಣ ಬೇಕಾಗುತ್ತೆ ಸೇರಿದಂತೆ ಇನ್ನಿತರ ಅಂಶ ಕುರಿತು ವರದಿ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಉಚಿತ ಪಾಸ್ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.
Advertisement
ಇವತ್ತು ದೊಡ್ಡ ಸವಾಲುಗಳನ್ನ ಸ್ವೀಕಾರ ಮಾಡಿದ್ದೇನೆ. ಎಲ್ಲದ್ದಕ್ಕು ಹಣ ಹೊಂದಿಸುವ ಜವಾಬ್ದಾರಿ ಇದೆ. ಹೀಗಾಗಿ ಶಿಕ್ಷಣ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ವರ್ಕೌಟ್ ಮಾಡಿ ಮಾಹಿತಿ ನೀಡಲು ಹೇಳಿದ್ದೇನೆ. ಅವರು ವರದಿ ನೀಡಿದ ಬಳಿಕ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.
Advertisement
ಇಂದು ನಡೆದ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ, ಪ್ರಾಥಮಿಕ ಶಿಕ್ಷಣ ಸಚಿವ ಮಹೇಶ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಭಾಗಿಯಾಗಿದ್ದರು.
Advertisement
ಚನ್ನಪಟ್ಟಣದಲ್ಲಿ ಸೋಮವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ್ದ ಸಿಎಂ, ಉಚಿತ ಬಸ್ ಪಾಸ್ ಬಗ್ಗೆ ಒಂದು ತೀರ್ಮಾನಕ್ಕೆ ಬರಬೇಕು ಎಂದುಕೊಂಡಿದ್ದೇನೆ. ನಾಳೆ ನಮ್ಮ ಅಧಿಕಾರಿಗಳು ಸಭೆ ಕರೆದಿದ್ದಾರೆ. ಯಾವ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಾರೆ. ಅಂತಹ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ಕೊಡುತ್ತೇವೆ ಎಂದು ಹೇಳಿದ್ದರು.
ನೀವು ರಾಜಕೀಯ ಮಾಡಿದರೆ, ನನಗೆ ರಾಜಕೀಯ ಮಾಡಲು ಗೊತ್ತಿಲ್ಲವೇ? 50 ಸಾವಿರ, 1 ಲಕ್ಷ ಡೊನೇಷನ್ ಕೊಟ್ಟು ಓದುವವರಿಗೆ ನಿಮಗೆ ಯಾಕೆ ಉಚಿತವಾದ ಪಾಸ್ ಎಂದು ಪ್ರಶ್ನಿಸಿದ್ದರು. ಆದ್ದರಿಂದ ಯಾರು ಈ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಓದುತ್ತಾರೋ ಅಂತಹ ಮಕ್ಕಳಿಗೆ ಅಂದರೆ ಎಲ್ಲಾ ಸರ್ಕಾರಿ ಮಕ್ಕಳಿಗೂ ಉಚಿತ ಬಸ್ ಪಾಸ್ ಕೊಡುತ್ತೇವೆ. ಈ ಬಗ್ಗೆ ನಾಳೆ ಸಭೆ ಕರೆದು ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದರು.