ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ.
ಮಾರ್ಚ್ 31 ರ ನಂತರ ಈ ನಿಯಮ ಜಾರಿಗೆ ಬರಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರದಾದ್ಯಂತ ಪೆಟ್ರೋಲ್ ಬಂಕ್‌ಗಳಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಸರ್ಕಾರ ನಿಲ್ಲಿಸಲಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಪೆಟ್ರೋಲ್ ಬಂಕ್‌ಗಳಲ್ಲಿ ಹಳೆಯ ವಾಹನಗಳಿಗೆ ಇಂಧನ ತುಂಬಿಸುವಂತಿಲ್ಲ. ಹಳೆಯ ವಾಹನಗಳನ್ನು ಗುರುತಿಸಲು ವಿಶೇಷ ತಂಡ ರಚನೆ ಮಾಡಲಾಗುವುದು. ಮಾಲಿನ್ಯ ನಿಯಂತ್ರಣಕ್ಕೆ ಹೋಟೆಲ್‌ಗಳಲ್ಲಿ ಹೊಗೆ ನಿರೋಧಕ ಅಳವಡಿಕೆ ಕಡ್ಡಾಯ ಎಂದು ಹೇಳಿದ್ದಾರೆ.
Advertisement
ವಾಯುಮಾಲಿನ್ಯದ ಸಂದರ್ಭದಲ್ಲಿ ಮೋಡ ಬಿತ್ತನೆಗೆ ತಯಾರಿ ಮಾಡಲಾಗಿದೆ. ಖಾಲಿ ಇರುವ ಸ್ಥಳಗಳಲ್ಲಿ ಗಿಡ-ಮರಗಳನ್ನು ನೆಟ್ಟು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement
2025 ರ ಡಿಸೆಂಬರ್ ವೇಳೆಗೆ ದೆಹಲಿಯಲ್ಲಿ ಸುಮಾರು ಶೇ.90 ರಷ್ಟು ಸಾರ್ವಜನಿಕ ಸಿಎನ್‌ಜಿ ಬಸ್‌ಗಳನ್ನು ಹಂತಹಂತವಾಗಿ ಸ್ಥಗಿತಗೊಳಿಸಲಾಗುವುದು. ಸ್ವಚ್ಛ ಮತ್ತು ಸುಸ್ಥಿರ ಸಾರ್ವಜನಿಕ ಸಾರಿಗೆಯತ್ತ ಸರ್ಕಾರದ ಒತ್ತು ನೀಡುವ ಭಾಗವಾಗಿ ಎಲೆಕ್ಟ್ರಿಕ್ ಬಸ್‌ಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.