– ಜನರು ಕೇಳುವ ಪ್ರಶ್ನೆಗೆ ನನ್ನ ಬಳಿ ಉತ್ತರ ಇಲ್ಲ
– ಆನಂದ್ ಸಿಂಗ್ ತಂದ ಅನುದಾನಲ್ಲಿ ಒಂದೂವರೆ ವರ್ಷ ಕೆಲಸ
ಬಳ್ಳಾರಿ: ಇಲ್ಲಿಯವರೆಗೆ ನಮ್ಮ ಕ್ಷೇತ್ರಕ್ಕೆ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ಶಾಸಕರು (BJP MLA’s) ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರುತ್ತಿದ್ದರು. ಆದರೆ ಈಗ ಕಾಂಗ್ರೆಸ್ ಶಾಸಕರೇ ಅನುದಾನದ ವಿಚಾರವನ್ನು ಪ್ರಸ್ತಾಪಿಸಿ ಸಿದ್ದರಾಮಯ್ಯ (Siddaramaiah) ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲು ಆರಂಭಿಸಿದ್ದಾರೆ.
ನೀವು ಶಾಸಕರಾಗಿ ಎರಡು ವರ್ಷ ಆಗುತ್ತಾ ಬಂದಿದೆ. ಏನು ಕೆಲಸ ಮಾಡಿದ್ದೀರಿ ತೋರಿಸಿ ಎಂದು ಜನ ನನ್ನನ್ನು ಕೇಳುತ್ತಿದ್ದಾರೆ. ಆದರೆ ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲು ಹಣ ಇಲ್ಲ. ನಮ್ಮದೇ ಸರ್ಕಾರ ಇದ್ದರೂ ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ (Hosapete) ಶಾಸಕ ಎಚ್ ಆರ್ ಗವಿಯಪ್ಪ (H. R. Gaviyappa) ತಮ್ಮದೇ ಸರ್ಕಾರದ ವಿರುದ್ದ ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: VRS ತೆಗೆದುಕೊಳ್ಳಿ ಅಥವಾ ವರ್ಗಾವಣೆಯಾಗಿ – ಹಿಂದೂಯೇತರ ಸಿಬ್ಬಂದಿ ಬೇಡ: ತಿರುಪತಿ ಬೋರ್ಡ್
Advertisement
Advertisement
ಬೇರೆ ಬೇರೆ ಕಡೆ ಅನುದಾನ ಸಿಗುತ್ತಿದೆ. ಆದರೆ ನನ್ನ ಕ್ಷೇತ್ರಕ್ಕೆ KKRDB ಸೇರಿದಂತೆ ಯಾವ ಅನುದಾನವೂ ಸರಿಯಾಗಿ ಸಿಗುತ್ತಿಲ್ಲ. ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಎಲ್ಲವನ್ನು ತಿಳಿದುಕೊಳ್ಳುವುದ್ದಕ್ಕೆ ಒಂದೂವರೆ ವರ್ಷ ಕಳೆದು ಬಿಟ್ಟೆ. ಇನ್ನು ಎಷ್ಟು ವರ್ಷ ಹೀಗೆ ಅನುದಾನವಿಲ್ಲದೇ ಇರಲು ಸಾಧ್ಯ ಎಂದು ಹೇಳುವ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದರು.
Advertisement
ಈ ಹಿಂದೆ ಇದ್ದ ಬಿಜೆಪಿ ಶಾಸಕ ಆನಂದ್ ಸಿಂಗ್ (Anand Singh) ತಂದ ಅನುದಾನದಲ್ಲಿಯೇ ಒಂದೂವರೆ ವರ್ಷ ಕೆಲಸ ನಡೆದಿದೆ. ಈಗಲಾದರೂ ನಮಗೆ ಕೆಲಸ ಮಾಡಲು ಅನುದಾನ ಬೇಕಲ್ವಾ? ಕೆಕೆಆರ್‌ಡಿಬಿಯಿಂದ ನೂತನ ವಿಜಯನಗರ ಜಿಲ್ಲೆಗೆ ಒಟ್ಟು 348 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ವಿಜಯನಗರ ಜಿಲ್ಲೆಯ ಬೇರೆ ಬೇರೆ ಕ್ಷೇತ್ರಗಳಿಗೆ 60, 70 ಕೋಟಿ ರೂ. ಅನುದಾನ ನೀಡಿದ್ದಾರೆ. ವಿಜಯನಗರ ಕ್ಷೇತ್ರಕ್ಕೆ ಕೇವಲ 22 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ.ಅದರಲ್ಲಿ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ 12 ಕೋಟಿ ರೂ. ಅನುದಾನ ನೀಡಿದ್ದೇನೆ. ಉಳಿದ 8 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿ ಏನು ಕೆಲಸ ಮಾಡಲು ಸಾಧ್ಯವಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
Advertisement
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದವೂ ಅಸಮಾಧಾನ ಹೊರ ಹಾಕಿದ ಅವರು, ಜಿಲ್ಲೆಗೆ ಬರುವ ಅನುದಾನದಲ್ಲಿ ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಉಸ್ತುವಾರಿ ಸಚಿವರು 25% ರಷ್ಟು ಅನುದಾನ ಮೀಸಲಿಡಬೇಕು. ಅದು ಜಿಲ್ಲಾ ಉಸ್ತುವಾರಿ ಸಚಿವರ ಕೈಯಲ್ಲಿ ಇರುತ್ತದೆ. ನಮ್ಮ ಜಿಲ್ಲಾ ಉಸ್ತುವಾರಿ ಜಮೀರ್ ಅಹ್ಮದ್ ಅವರು ಅದನ್ನು ಮಾಡಿಲ್ಲ. ಬೇಕಾದ್ರೆ ಅವರ ವಿವೇಚನೆಗೆ ಬಂದಂತೆ ಅನುದಾನ ಬಳಸಲಿ. ನಾನು ಏನೂ ಕೇಳಲ್ಲ. ಒಟ್ಟಿನಲ್ಲಿ ನನ್ನ ಕ್ಷೇತ್ರದಲ್ಲಿ ಕೆಲಸ ಆಗಬೇಕು ಎಂದು ನೇರವಾಗಿಗೆ ಸಿಟ್ಟು ಹೊರ ಹಾಕಿದರು.