ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಬೀಡುಬಿಟ್ಟಿದ್ದಾರೆ.
ಸಂಘಟನೆಗಳ ಮುಖಂಡರು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಂಗಳವಾರ ಬೆಳಿಗ್ಗೆ ಸಿದ್ಧತೆಯಲ್ಲಿ ತೊಡಗಿದ್ದರು. ಪೆಂಡಾಲ್ ಸಹ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು. ಸಂಜೆ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಪೆಂಡಾಲ್ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿದ್ದಾರೆ. ಇದನ್ನೂ ಓದಿ: 200 ವರ್ಷಗಳಿಂದ ವಕ್ಪ್ ಆಸ್ತಿ , ಎರಡು ಬಾರಿ ನಮಾಜ್‌ಗೆ ಮಾತ್ರ ಅವಕಾಶ – ಸುಪ್ರೀಂ ಕೋರ್ಟ್‌ನಲ್ಲಿ ವಾದ ಹೇಗಿತ್ತು?
Advertisement
Advertisement
ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಬೆಂಗಳೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದ ಈದ್ಗಾ ಬಂದೋಬಸ್ತ್ಗೆ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. 1,600 ಪೊಲೀಸರು ಹಗಲು, ಗ್ರೌಂಡ್‌ಬಳಿ ಬೀಡುಬಿಟ್ಟಿದ್ದಾರೆ. ಈ ಮೂಲಕ ಗಣೇಶೋತ್ಸವಕ್ಕೆ ಅವಕಾಶ ಕೊಡಲಿ ಬಿಡಲಿ, ಶಾಂತಿ ಭಂಗಕ್ಕೆ ಅವಕಾಶವಿಲ್ಲ ಅನ್ನೋ ಸಂದೇಶ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ- ತಂದೆಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 7ರ ಬಾಲಕ
Advertisement
Advertisement
ಹೇಗಿದೆ ಬಂದೋಬಸ್ತ್?
ಮೈದಾನದ ಸುತ್ತ 3 ಡಿಸಿಪಿ, 21 ಎಸಿಪಿ, 47 ಪಿಐ, 130 ಪಿಎಸ್‌ಐ, 126 ಎಎಸ್‌ಐ, 900 ಹೆಚ್‌ಇ ಪಿಸಿ, 120 ಆರ್‌ಎಎಫ್, 100 ಸ್ವಾಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮಂಗಳವಾರ ಪಥಸಂಚಲನ ನಡೆಸಿ ಸ್ಥಳೀಯರಲ್ಲಿ ಧೈರ್ಯ ತುಂಬಿದ್ದಾರೆ.