Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:200 ವರ್ಷಗಳಿಂದ ವಕ್ಪ್ ಆಸ್ತಿ , ಎರಡು ಬಾರಿ ನಮಾಜ್‌ಗೆ ಮಾತ್ರ ಅವಕಾಶ – ಸುಪ್ರೀಂ ಕೋರ್ಟ್‌ನಲ್ಲಿ ವಾದ ಹೇಗಿತ್ತು?
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 200 ವರ್ಷಗಳಿಂದ ವಕ್ಪ್ ಆಸ್ತಿ , ಎರಡು ಬಾರಿ ನಮಾಜ್‌ಗೆ ಮಾತ್ರ ಅವಕಾಶ – ಸುಪ್ರೀಂ ಕೋರ್ಟ್‌ನಲ್ಲಿ ವಾದ ಹೇಗಿತ್ತು?

Bengaluru City

200 ವರ್ಷಗಳಿಂದ ವಕ್ಪ್ ಆಸ್ತಿ , ಎರಡು ಬಾರಿ ನಮಾಜ್‌ಗೆ ಮಾತ್ರ ಅವಕಾಶ – ಸುಪ್ರೀಂ ಕೋರ್ಟ್‌ನಲ್ಲಿ ವಾದ ಹೇಗಿತ್ತು?

Public TV
Last updated: August 30, 2022 9:28 pm
Public TV
Share
3 Min Read
supreme court
SHARE

ನವದೆಹಲಿ: “ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ. ವಿವಾದ ಇತ್ಯರ್ಥಕ್ಕೆ ಮತ್ತೆ ಹೈಕೋರ್ಟ್‍ಗೆ ಹೋಗಿ” – ಇದು ಸುಪ್ರೀಂ ನೀಡಿದ ಆದೇಶದ ಸಾರ.

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಅನ್ನೋ ವಿಚಾರಕ್ಕೆ ಸುಪ್ರೀಂಕೋರ್ಟ್‍ನಲ್ಲಿ ನಡೆದ ವಿಚಾರಣೆ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಕೊನೆಗೆ ಸುಪ್ರೀಂ ಕೋರ್ಟ್‌ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ ಎಂದು ಆದೇಶ ಪ್ರಕಟಿಸಿತು.

ಚಾಮರಾಜಪೇಟೆ ಮೈದಾನದ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೈಕೋರ್ಟ್‌ ದ್ವಿಸದಸ್ಯ ಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್‌ ಸುಪ್ರೀಂ ಮೆಟ್ಟಿಲೇರಿತ್ತು.

idgah maidan

ಮೊದಲು ಈ ಅರ್ಜಿಯ ವಿಚಾರಣೆ ನ್ಯಾ. ಹೇಮಂತ್ ಗುಪ್ತಾ ಮತ್ತು ನ್ಯಾ. ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಮಧ್ಯಾಹ್ನ ಸುಮಾರು ಒಂದೂವರೆ ಗಂಟೆ ಕಾಲ ವಿಚಾರಣೆ ನಡೆಯಿತು. ಆದರೆ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಎಂಬ ವಿಚಾರವಾಗಿ ನ್ಯಾಯಮೂರ್ತಿಗಳಲ್ಲೇ ಭಿನ್ನ ಅಭಿಪ್ರಾಯಗಳು ವ್ಯಕ್ತವಾದ ಕಾರಣ, ಪ್ರಕರಣ ವಿಚಾರಣೆಯನ್ನು ಮುಖ್ಯ ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಿದರು. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ- ತಂದೆಯ ವಿರುದ್ಧ ಪೊಲೀಸ್ ಮೆಟ್ಟಿಲೇರಿದ 7ರ ಬಾಲಕ

ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್, ಈ ಪ್ರಕರಣದ ವಿಚಾರಣೆಗೆ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ, ಎಎಸ್ ಓಖಾ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವನ್ನು ರಚಿಸಿ, ತುರ್ತು ವಿಚಾರಣೆಗೆ ಸೂಚಿಸಿದ್ರು.

ಕೋರ್ಟ್ ಕಲಾಪ ಮುಗಿಯುವ ಹೊತ್ತಲ್ಲಿ ಸಂಜೆ 4.30ಕ್ಕೆ ಈ ಪೀಠ ವಿಚಾರಣೆ ನಡೆಸಿತು. ವಕ್ಫ್ ಬೋರ್ಡ್ ಪರವಾಗಿ ಹಿರಿಯ ವಕೀಲ ಕಪಿಲ್‍ಸಿಬಲ್, ದುಷ್ಯಂತ್ ದವೆ ಪ್ರಬಲ ವಾದ ಮಂಡಿಸಿದರು. ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಮುಕುಲ್ ರೊಹ್ಟಗಿ ವಾದ ಮಂಡಿಸಿದರು. ಸಂಜೆ 6:20ಕ್ಕೆ ಸುಪ್ರೀಂಕೋರ್ಟ್ ಯಥಾ ಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿ ಆದೇಶ ನೀಡಿತು.

GANESHA FESTIVAL 1

ವಕ್ಫ್‌ ಬೋರ್ಡ್‌ ವಾದ ಏನು?
ಚಾಮರಾಜಪೇಟೆಯ ಈದ್ಗಾ ಮೈದಾನ 200 ವರ್ಷಗಳಿಂದ ವಕ್ಪ್ ಆಸ್ತಿಯಾಗಿದೆ, ಇಲ್ಲಿ ವರ್ಷಕ್ಕೆ ಎರಡು ಬಾರಿ ಸಾಮೂಹಿಕವಾಗಿ ನಮಾಜು ಮಾಡಲಾಗುತ್ತದೆ. ಸರ್ಕಾರದ ಹಲವು ದಾಖಲೆಗಳ ಪ್ರಕಾರ ಇಲ್ಲೂ ಸ್ಮಶಾನವೂ ಇತ್ತು. ಇಲ್ಲಿ ಬೇರೆ ಧಾರ್ಮಿಕ ಆಚರಣೆಗಳನ್ನು ಮಾಡಲು ಸಾಧ್ಯವಿಲ್ಲ. ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಇತರೆ ಅಲ್ಪಸಂಖ್ಯಾತರ ಆಚರಣೆ ಮಾಡಲು ಸಾಧ್ಯವೇ? ಅದೇ ರೀತಿ ಈದ್ಗಾದಲ್ಲಿ ಗಣೇಶ ಚತುರ್ಥಿ ಸಾಧ್ಯವಿಲ್ಲ.

ರಾಜ್ಯ ಸರ್ಕಾರದ ವಾದ ಏನು?
ಈದ್ಗಾ ಮೈದಾನ ವಕ್ಪ್ ಬೋರ್ಡ್ ಆಸ್ತಿಯಲ್ಲ, ಇದು ರಾಜ್ಯ ಸರ್ಕಾರದ ಆಸ್ತಿ. ಕಂದಾಯ ಇಲಾಖೆ ದಾಖಲೆಗಳಲ್ಲಿ ಮಕ್ಕಳ ಆಟದ ಮೈದಾನ, ಸರ್ಕಾರಿ ಜಾಗ ಎಂದು ಉಲ್ಲೇಖವಾಗಿದೆ. ಸರ್ಕಾರದ ಆಸ್ತಿಯನ್ನು ಯಾರು ಮುಟ್ಟಲು ಸಾಧ್ಯವಿಲ್ಲ. ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲು ಕೋರ್ಟ್ ಅವಕಾಶ ನೀಡಿದೆ ಎಂದರೇ ಅದು ಸರ್ಕಾರದ ಆಸ್ತಿ ಎಂದೇ ಅರ್ಥ. ಈ ಕಾರಣಕ್ಕೆ ಹೈಕೋರ್ಟ್‌ ಆದೇಶದಂತೆ ಎರಡು ದಿನದ ಮಟ್ಟಿಗೆ ಗಣೇಶ ಚತುರ್ಥಿಗೆ ಅವಕಾಶ ನೀಡಬೇಕು. ತಾತ್ಕಾಲಿಕ ವ್ಯವಸ್ಥೆಯಲ್ಲಿ ಹಬ್ಬ ಆಚರಿಸಲು ಅನುಮತಿ ನೀಡಬೇಕು.

ಸುಪ್ರೀಂ ಕೇಳಿದ ಪ್ರಶ್ನೆ ಏನು?
ವಿಚಾರಣೆ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಸುಪ್ರೀಂಕೋರ್ಟ್ ಹಿಂದೆ 200 ವರ್ಷ ಹಿಂದೆ ಗಣೇಶ ಚತುರ್ಥಿ ಅಲ್ಲದೇ ಬೇರೆ ಧಾರ್ಮಿಕ ಆಚರಣೆಗಳನ್ನು ಆಚರಿಸಲಾಗಿದ್ಯಾ ಎಂದು ಪ್ರಶ್ನೆ ಮಾಡಿತು. ಇದಕ್ಕೆ ʼಇಲ್ಲʼ ಎಂದು ಉತ್ತರ ಬಂದಾಗ, ಹಬ್ಬಕ್ಕೆ ತಯಾರಿ ಮಾಡಿಕೊಂಡಿದ್ಯಾ ಎಂದು ಮರು ಪ್ರಶ್ನೆ ಹಾಕಿತು. ಇದಕ್ಕೂ ʼಇಲ್ಲʼ ಎಂದು ಉತ್ತರ ಬಂತು. ಆಸ್ತಿಯ ಬಗ್ಗೆ ಗೊಂದಲಗಳಿದೆ. ಅಲ್ಲದೇ ಧಾರ್ಮಿಕ ಸೂಕ್ಷ್ಮ ವರ್ಷದ ವಿಚಾರವೂ ಆಗಿರುವ ಹಿನ್ನಲೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಕೋರ್ಟ್ ಆದೇಶ ನೀಡಿತು. ಅಲ್ಲದೇ ಆಸ್ತಿ ಮಾಲಿಕತ್ವದ ಬಗ್ಗೆ ಹೈಕೋರ್ಟ್ ನಲ್ಲಿ ನಿರ್ಣಯ ಮಾಡಿಕೊಳ್ಳಲು ಸೂಚನೆ ನೀಡಿತು.

Live Tv
[brid partner=56869869 player=32851 video=960834 autoplay=true]

TAGGED:arnatakaganesh chaturthiGaneshotsavhigh courtSupreme Courtಈದ್ಗಾ ಮೈದಾನವಕ್ಫ್ ಬೋರ್ಡ್ಸುಪ್ರೀಂ ಕೋರ್ಟ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
13 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
15 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
24 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
1 hour ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
1 hour ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?