ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.
Advertisement
Advertisement
ಮಾರ್ಚ್ 28ರಿಂದ ಎಪ್ರಿಲ್ 11ರ ವರೆಗೆ ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರ ಧರಿಸಿ ಕೇಂದ್ರಕ್ಕೆ ಬರಬೇಕು ಎಂದು ಅಧೀಕೃತ ಸುತ್ತೋಲೆ ಹೊರಡಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಜಬ್‍ಗಾಗಿ ಪ್ರತಿಭಟನೆ – ಪೊಲೀಸರಿಂದ ಕಾನೂನು ಕ್ರಮದ ಎಚ್ಚರಿಕೆ
Advertisement
Advertisement
ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ಮಾತ್ರ ವಿದ್ಯಾರ್ಥಿಗಳು ಧರಿಸಿ ಬರಬೇಕು. ಹಾಗೆಯೇ ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿ ನಿಗದಿ ಪಡಿಸಿದ ಸಮವಸ್ತ್ರ ಧರಿಸಿ ಬರಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಮಹಾತ್ಮ ಗಾಂಧಿ ಧರ್ಮಪತ್ನಿ ಕೂಡ ತಲೆಗೆ ಸೆರಗು ಹಾಕುತ್ತಿದ್ದರು: ಹಿಜಬ್ ಬೆಂಬಲಿಸಿದ ಹೆಚ್‌ಡಿಕೆ
ತನ್ನ ಸುತ್ತೋಲೆಯಲ್ಲಿ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ಹೈಕೋರ್ಟ್ ತೀರ್ಪಿನಂತೆ ಈ ಆದೇಶವನ್ನು ಪ್ರಕಟಿಸಲಾಗಿದೆ. 80 ಸಾವಿರಕ್ಕೂ ಹೆಚ್ಚು ಮುಸ್ಲಿಮ್ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ. 600-700 ವಿದ್ಯಾರ್ಥಿನಿಯರು ಇಲ್ಲಿಯವರೆಗೆ ಗೈರಾಗಿದ್ದಾರೆ. ಹೀಗಾಗಿ ಸಮವಸ್ತ್ರದಲ್ಲೇ ಪರೀಕ್ಷೆ ಬರೆಯಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.