ಬೆಂಗಳೂರು: ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ ರೈತರಿಗಾಗುತ್ತಿರುವ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಹೇಳಿದ್ದಾರೆ.
ವಿಧಾನ ಪರಿಷತ್ ಕಲಾಪದ (Session) ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ (BJP) ತುಳಿಸಿ ಮುನಿರಾಜುಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಜಮೀನಿನ ಮೌಲ್ಯ ಪರಿಷ್ಕರಣೆ ನಡೆಸಿ ಕನಿಷ್ಟ ನಾಲ್ಕು ವರ್ಷವಾಗಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಜಮೀನು ಮೌಲ್ಯ ಪರಿಷ್ಕರಣೆ ನಡೆಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ತಪ್ಪಿದ ಭಾರೀ ದುರಂತ – ಖಾಸಗಿ ವಿಮಾನ ತುರ್ತು ಭೂಸ್ಪರ್ಶ
ಜಮೀನಿನ ಮೌಲ್ಯ ಪರಿಷ್ಕರಣೆಯ ಆಧಾರದಲ್ಲಿ ರೈತರ ಭೂಮಿಗಳಿಗೆ ಮಾರುಕಟ್ಟೆ ಮೌಲ್ಯ ನಿಗದಿಯಾಗುತ್ತದೆ. ಆದರೆ ರೈತರು ಜಮೀನು ಮಾರಾಟಕ್ಕೆ ಮುಂದಾಗುವಾಗ ಅವರಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಅಲ್ಲದೆ ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಹಣ ವಹಿವಾಟು ಅಧಿಕವಾಗಿದ್ದು ಕಪ್ಪು ಹಣ ಪರಿವರ್ತನೆಗೂ ಕಾರಣವಾಗಿದೆ. ಹೀಗಾಗಿ ಜಮೀನಿನ ಮೌಲ್ಯವನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಸಬ್ ರಿಜಿಸ್ಟ್ರಾರ್ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ಮುನಿರಾಜುಗೌಡ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವರು, ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಅಧಿಕ ಸಂಖ್ಯೆಯಲ್ಲಿ ಜನ ಬರುವ ಕಾರಣ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ವಹಣೆ ಸವಾಲಿನ ಕೆಲಸವಾಗಿದೆ. ಆದರೆ ಮುಂದಿನ ಒಂದು ವರ್ಷದಲ್ಲಿ ಎಲ್ಲಾ ಕಚೇರಿಗಳಲ್ಲೂ ಉತ್ತಮ ಜನಸ್ನೇಹಿ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಪಾಸ್‍ಪೋರ್ಟ್ ಕಚೇರಿಗಳ ಮಾದರಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲೂ ಉತ್ತಮ ಮೂಲಭೂತ ಸೌಲಭ್ಯ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದ್ಮೇಲೂ ಸಾಬ್ರಿಗೆ ರಕ್ಷಣೆ ಇಲ್ಲ: ರೇವಣ್ಣ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]