ನವದೆಹಲಿ: ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಮೇಲೆ ನನಗೆ ಯಾವುದೇ ಭರವಸೆ ಇಲ್ಲ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್‌ನಿಂದ ಪರಿಹಾರ ಸಿಗುತ್ತದೆ ಎಂದುಕೊಂಡಿದ್ದರೆ ಅದು ನಿಮ್ಮ ತಪ್ಪು ಭಾವನೆಯಾಗಿದೆ. ನಾನು ಸುಪ್ರೀಂ ಕೋರ್ಟ್‌ನಲ್ಲಿ 50 ವರ್ಷಗಳ ಕಾರ್ಯನಿರ್ವಹಿಸಿ ಪೂರ್ಣಗೊಳಿಸಿದ ನಂತರ ಈ ಮಾತನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಸಿಆರ್ ಮತ್ತೊಬ್ಬ ನಿಜಾಮನಂತೆ ವರ್ತಿಸುತ್ತಿದ್ದಾರೆ: ತೆಲಂಗಾಣ ಸಿಎಂ ವಿರುದ್ಧ ಗೋಯಲ್ ಕಿಡಿ
ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದರೂ, ಅದು ನೆಲದ ವಾಸ್ತವತೆಯನ್ನು ಎಂದಿಗೂ ಬದಲಾಯಿಸುವುದಿಲ್ಲ ಎಂದ ಅವರು, ಈ ವರ್ಷ ನಾನು ಸುಪ್ರೀಂ ಕೋರ್ಟ್‌ನಲ್ಲಿ 50 ವರ್ಷಗಳ ಅಭ್ಯಾಸವನ್ನು ಪೂರ್ಣಗೊಳಿಸುತ್ತೇನೆ. 50 ವರ್ಷಗಳ ನಂತರ ನನಗೆ ಸುಪ್ರೀಂ ಕೋರ್ಟ್ ಮೇಲೆ ಯಾವುದೇ ಭರವಸೆ ಇಲ್ಲ. ನೀವು ಸುಪ್ರೀಂ ಕೋರ್ಟ್ ನೀಡಿದ ಪ್ರಗತಿಪರ ತೀರ್ಪುಗಳ ಬಗ್ಗೆ ಮಾತನಾಡುತ್ತೀರಿ. ಆದರೆ ವಾಸ್ತವವಾಗಿ ಏನಾಗುತ್ತದೆ ಎಂಬುದರಲ್ಲಿ ಭಾರಿ ವ್ಯತ್ಯಾಸವಿದೆ. ಖಾಸಗಿತನದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇ.ಡಿ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ. ನಿಮ್ಮ ಖಾಸಗಿತನ ಎಲ್ಲಿದೆ ಎಂದು ಸಿಬಲ್ ಪ್ರಶ್ನಿಸಿದ್ದಾರೆ.
ನಾನು 50 ವರ್ಷಗಳಿಂದ ಸೇವೆ ಸಲ್ಲಿಸಿದ ನ್ಯಾಯಾಲಯದ ಬಗ್ಗೆ ಈ ರೀತಿ ಮಾತನಾಡಬೇಕೆಂದು ಬಯಸಲ್ಲ. ಆದರೆ ಮಾತನಾಡಲೇ ಬೇಕಾದ ಸಂದರ್ಭವಾಗಿದೆ. ನಾವು ಮಾತನಾಡದಿದ್ದರೆ, ಬೇರೆ ಯಾರು ಮಾತನಾಡುತ್ತಾರೆ ಎಂದು ಕೇಳಿದ್ದಾರೆ. ಇದನ್ನೂ ಓದಿ: ಭಾರತದ ಜಲಗಡಿಗೆ ಬಂದಿದ್ದ ಪಾಕ್ ಯದ್ಧನೌಕೆಯನ್ನು ಓಡಿಸಿದ ಡಾರ್ನಿಯರ್