ಭೋಪಾಲ್: ಅದು ಸಾವಿರ ಬೆಡ್‍ಗಳಿರುವ ಜಿಲ್ಲೆಯ ಅತ್ಯಂತ ದೊಡ್ಡ ಆಸ್ಪತ್ರೆ. ಆದರೆ ಇಂತಹ ಆಸ್ಪತ್ರೆಯಲ್ಲಿ ವೃದ್ದರೊಬ್ಬರನ್ನು ಸ್ಟ್ರೆಚರ್ (Stretcher) ಇಲ್ಲದೆ ಬಟ್ಟೆಯಲ್ಲಿಯೇ ಎಳೆದುಕೊಂಡು ಹೋಗಿರುವ ಮನಕಲಕುವ ಘಟನೆ ನಡೆದಿದೆ.
ಹೌದು. ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಆಸ್ಪತ್ರೆ ಸದ್ಯ ಸುದ್ದಿಯಲ್ಲಿದೆ. ಎರಡೂ ಕಾಲುಗಳು ಗಾಯಗೊಂಡಿರುವ ವೃದ್ದರೊಬ್ಬರು ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಇಲ್ಲದೆ ಸಂಬಂಧಿಕರೊಬ್ಬರು ಬಟ್ಟೆಯಲ್ಲಿ ಕುಳಿತುಕೊಳ್ಳುವಂತೆ ಹೇಳಿ ಎಳೆದುಕೊಂಡು ಹೋಗಿದ್ದಾರೆ. ಇದರ ವೀಡಿಯೋವನ್ನು ಅಲ್ಲೇ ಇದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
Advertisement
Advertisement
ಈ ಸಂಬಂಧ ರೋಗಿ ಮತ್ತು ಆತನ ಸಂಬಂಧಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 400 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆಯಲ್ಲಿ ಬೇಕಾದಷ್ಟು ಸ್ಟ್ರೆಚರ್ ಇಲ್ಲ. ಇನ್ನೂ ಇದ್ದ ಸ್ಟ್ರೆಚರ್ ಗಳಲ್ಲಿ ಚಕ್ರ ಸರಿ ಇಲ್ಲ ಎಂದು ಕಿಡಿಕಾರಿದ್ದಾರೆ.
Advertisement
ವೃದ್ಧ ಸೈಕಲ್‍ನಿಂದ ಬಿದ್ದಿದ್ದಾರೆ. ಗ್ವಾಲಿಯರ್ ನಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಭಿಂಡ್ ಜಿಲ್ಲೆಯಿಂದ ಬಂದಿರುವುದಾಗಿ ರೋಗಿಯ ಸಂಬಂಧಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಕೊಂದ ತಾಯಿ
Advertisement
ಸದ್ಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.