-ಸಿಪಿವೈ ಕುತಂತ್ರದಿಂದ ಗೆಲುವು ಸಾಧಿಸಿದ್ದಾರೆ
ಚಿಕ್ಕಬಳ್ಳಾಪುರ: 18 ಮಂದಿ ಜೆಡಿಎಸ್ (JDS) ಶಾಸಕರ ಪೈಕಿ ಯಾರೊಬ್ಬರೂ ಕೂಡ ಕಾಂಗ್ರೆಸ್ (Congress) ಸೇರೋದಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ (BN Ravikumar) ಹೇಳಿದರು.
ಶಾಸಕರ ಸ್ವಗ್ರಾಮ ಮೇಲೂರು ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿ ನಂತರ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, 18 ಶಾಸಕರ ಪೈಕಿ ಯಾರೂ ಕೂಡ ಕಾಂಗ್ರೆಸ್ ಸೇರೋದಿಲ್ಲ. ಒಬ್ಬರೂ ಸಹ ಪಕ್ಷ ಬಿಡೋದಿಲ್ಲ. ಪಕ್ಷದ ವಿರುದ್ಧವಾಗಿ ನಡೆದುಕೊಳ್ಳುವವರಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಾವಿನಲ್ಲೂ ಒಂದಾದ ದಂಪತಿ – ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ (CP Yogeshwar) ಕುತಂತ್ರದಿಂದ ಗೆಲುವು ಸಾಧಿಸಿದ್ದಾರೆ. ಎರಡು ಸಮುದಾಯ ಕಾಂಗ್ರೆಸ್ ಪರ ಇದ್ದ ಕಾರಣ ಕಾಂಗ್ರೆಸ್‌ಗೆ ಗೆಲುವಾಗಿದೆ. ಯೋಗೇಶ್ವರ್ ಯಾವ ಯಾವ ಸಮಯದಲ್ಲಿ ಎಲ್ಲಿ ಇದ್ದವರು, ಯಾವ ಯಾವ ಪಕ್ಷದಿಂದ ಪಕ್ಷಾಂತರ ಮಾಡಿ ಮಂತ್ರಿ ಆದರು ಅನ್ನೋದು ಗೊತ್ತಿದೆ. ಯೋಗೇಶ್ವರ್ ಹೇಳುವ ಹಾಗೆ ಜೆಡಿಎಸ್ ಪಕ್ಷದ ಅವನತಿ ಸಾಧ್ಯ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್
ಇದು ದೇವೇಗೌಡರು ಕಟ್ಟಿರುವ ಜೆಡಿಎಸ್ ಪಕ್ಷ. ಲಕ್ಷಾಂತರ ಮಂದಿ ಸ್ವಾಭಿಮಾನಿ ಮುಖಂಡರು ಕಾರ್ಯಕರ್ತರು ಇರುವ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಮುಕ್ತ ಆಗುತ್ತಿದೆ. ಅದಕ್ಕೆ ಮಹಾರಾಷ್ಟ್ರ ಚುನಾವಣೆಯೇ ಸಾಕ್ಷಿ. ಮುಂದೆ ಕರ್ನಾಟಕ ಸಹ ಕಾಂಗ್ರೆಸ್ ಮುಕ್ತ ಆಗಲಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ – 8 ಮಂದಿ ಬಂಧನ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿಲ್ಲ. ಬದಲಾಗಿ ಜೆಡಿಎಸ್ ಪಕ್ಷ ಮುಗಿಸಬೇಕು ಅನ್ನೋದೇ ಕಾಂಗ್ರೆಸ್ ಸಾಧನೆಯಾಗಿದೆ. ಕಳೆದ ಒಂದೂವರೆ ವರ್ಷದಿಂದ ದೇವೇಗೌಡರ ಕುಟುಂಬ ಮುಗಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಹೋದರೆ ಕಾಂಗ್ರೆಸ್‌ಗೆ ಲಾಭ ಆಗಲಿದೆ ಎಂದು ಹುನ್ನಾರ ನಡೆಸುತ್ತಿದ್ದಾರೆ. ಎಂಪಿ ಚುನಾವಣಾ ಫಲಿತಾಂಶದಿಂದ ಜೆಡಿಎಸ್ ಮುಗಿಸಲು ತೀರ್ಮಾನ ಮಾಡಿದ್ದಾರೆ. ರಾಜ್ಯದ ಹಣ ಲೂಟಿ ಮಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಯೋಗೇಶ್ವರ್ ನಂಬಿ ನಾವು ಗೆದ್ದು ಬಂದಿಲ್ಲ: ಶಾರದಾ ಪೂರ್ಯನಾಯ್ಕ್ ತಿರುಗೇಟು