ನವದೆಹಲಿ: 2022ರ ಅವಧಿಯಲ್ಲಿ ಕಾಶ್ಮೀರಿ ಪಂಡಿತರು ಯಾರೂ ಕಣಿವೆಯನ್ನು ತೊರೆದಿಲ್ಲ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ತಿಳಿಸಿದರು.
ಸಂಸತ್ತಿನಲ್ಲಿ ಮಾತನಾಡಿದ ಅವರು, 2019ರ ಅಗಸ್ಟ್‌ನಲ್ಲಿ 320ನೇ ವಿಧಿಯನ್ನು ರದ್ದುಪಡಿಸಿದ ನಂತರ ಯಾವುದೇ ಕಾಶ್ಮೀರಿ ಪಂಡಿತರು ವಲಸೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಕಾಶ್ಮೀರಿ ಪಂಡಿತರ ಮೇಲೆ ಭಯೋತ್ಪಾದಕರಿಂದ ನಿರಂತರವಾಗಿ ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆಯಲ್ಲಿ ಕಾಶ್ಮೀರಿ ಪಂಡಿತರು ಕಣಿವೆ ತೊರೆಯುತ್ತಿದ್ದೇವೆ ಎಂದು ಪಂಡಿತ ಕುಟುಂಬಗಳು ಕಾಶ್ಮೀರವನ್ನು ತೊರೆಯುತ್ತಿರುವ ವೀಡಿಯೋವೊಂದು ವೈರಲ್ ಆಗಿತ್ತು. ಜೊತೆಗೆ ಸರ್ಕಾರವು ಜನರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ದೂರಿದ್ದರು. ಅಷ್ಟೇ ಅಲ್ಲದೇ ಅನೇಕರು ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡುವುದಾಗಿಯೂ ತಿಳಿಸಿದ್ದರು. ಇದನ್ನೂ ಓದಿ: ಹತ್ಯೆಯ ದಿನವೇ ಮುಸ್ಲಿಂ ಸ್ನೇಹಿತನ ಗೃಹಪ್ರವೇಶಕ್ಕೆ ಹೋಗಿದ್ದ ಪ್ರವೀಣ್ ನೆಟ್ಟಾರ್!
Advertisement
ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿ ಅಭಿವೃದ್ಧಿ ಪ್ಯಾಕೇಜ್(ಪಿಎಂಡಿಪಿ) ಅಡಿಯಲ್ಲಿ ಕೆಲಸ ಮಾಡುವ ಯಾವುದೇ ಕಾಶ್ಮೀರಿ ಪಂಡಿತರು ರಾಜೀನಾಮೆಯನ್ನು ನೀಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸದನದಲ್ಲಿ ಕಾಗದ ಹಾರಿಸಿದ್ದ ಆಪ್ ಸಂಸದ ಅಮಾನತು