ಗಮನಿಸಿ, ನಾಳೆ ತಮಿಳುನಾಡಿಗೆ ಕೆಎಸ್ಆರ್‌ಟಿಸಿ ಬಸ್ ಸಂಚರಿಸಲ್ಲ

Public TV
0 Min Read
ksrtc

ಬೆಂಗಳೂರು: ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಾಳೆ ತಮಿಳುನಾಡಿಗೆ ಸಂಚರಿಸುವ ಎಲ್ಲ ಕೆಎಸ್ಆರ್‌ಟಿಸಿ ಬಸ್‍ಗಳ ಸಂಚಾರ ಸ್ಥಗಿತಗೊಳ್ಳಲಿದೆ.

ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ನಾಳೆ ವಿವಿಧ ಸಂಘಟನೆಗಳು ತಮಿಳುನಾಡು ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ ಮುಂಜಾಗೃತ ಕ್ರಮವಾಗಿ ನಾಳೆ ಬೆಳಗ್ಗೆಯಿಂದ ರಾತ್ರಿಯವರೆಗೆ ಕರ್ನಾಟಕದಿಂದ ತಮಿಳುನಾಡಿಗೆ ಹೋಗುವ ಎಲ್ಲಾ ಕೆಎಸ್ಆರ್‌ಟಿಸಿ ಬಸ್‍ಗಳ ಸಂಚಾರವನ್ನು ಸ್ಥಗಿತಗೊಳಿಸಿದೆ.

ಪ್ರತಿಭಟನೆ ವೇಳೆ ಯಾವುದೇ ಬಸ್‍ಗಳಿಗೆ ಹಾನಿಯಾಗಬಾರದು ಎನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಾಳೆ ರಾತ್ರಿಯ ಸಂಚಾರ ಎಂದಿನಂತೆ ಪ್ರಾರಂಭವಾಗಲಿದೆ ಎಂದು ಕೆಎಸ್ಆರ್‌ಟಿಸಿ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ.

KSRTC 2

 

Share This Article
Leave a Comment

Leave a Reply

Your email address will not be published. Required fields are marked *