ನವದೆಹಲಿ: ಸುಮಾರು 300 ಪ್ರಯಾಣಿಕರ ಜೀವವನ್ನು ಬಲಿತೆಗೆದುಕೊಂಡ ಬಾಲಸೋರ್ ಅಪಘಾತದ (Balasore Train Accident) ಬಳಿಕವೂ ಸರ್ಕಾರ ಎಚ್ಚೆತ್ತುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು-ದರ್ಭಾಂಗ ರೈಲು ಅಪಘಾತದ (Mysuru-Darbhanga Train Accident) ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮೈಸೂರು-ದರ್ಭಾಂಗ್ ರೈಲು ಅಪಘಾತವು ಭೀಕರವಾದ ಬಾಲಸೋರ್ ಅಪಘಾತವನ್ನು ಹೋಲುತ್ತದೆ. ಆ ಅಪಘಾತದಿಂದ ಸರ್ಕಾರ ಯಾವುದೇ ಪಾಠಗಳನ್ನು ಕಲಿತಿಲ್ಲ. ಈ ಅಪಘಾತದ ಹೊಣೆಗಾರಿಕೆ ಮೇಲಿಂದ ಪ್ರಾರಂಭವಾಗುತ್ತದೆ. ಈ ಸರ್ಕಾರ ಎಚ್ಚೆತ್ತುಕೊಳ್ಳುವ ಮೊದಲು ಇನ್ನೂ ಎಷ್ಟು ಕುಟುಂಬಗಳು ನಾಶವಾಗಬೇಕು? ಎಂದು ಅವರು ಟೀಕಿಸಿದ್ದಾರೆ.
Advertisement
Advertisement
ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ ಮೈಸೂರು-ದರ್ಭಾಂಗ್ ಬಾಗಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ 13 ಬೋಗಿಗಳು ಹಳಿ ತಪ್ಪಿದ್ದವು. ಅಪಘಾತದಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ರೈಲು ಸಂಚಾರ ಸ್ಥಗಿತಗೊಂಡಿದೆ. ರೈಲು ಹಳಿಗಳ ಮೇಲೆ ಬಿದ್ದಿರುವ ಬೋಗಿಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
Advertisement
Advertisement
ರೈಲು ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಘರ್ಷಣೆಯ ಬಗ್ಗೆ ನಮಗೆ ಮಾಹಿತಿ ಬಂದ ತಕ್ಷಣ 22 ಆಂಬ್ಯುಲೆನ್ಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅವರ ತಂಗಲು ಮೂರು ಸಭಾಂಗಣಗಳನ್ನು ತೆರೆಯಲಾಗಿದೆ. ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.