Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಯಸ್ಕರಲ್ಲಿ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ; ಐಸಿಎಂಆರ್-ಏಮ್ಸ್ ವರದಿಯಲ್ಲಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ವಯಸ್ಕರಲ್ಲಿ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ; ಐಸಿಎಂಆರ್-ಏಮ್ಸ್ ವರದಿಯಲ್ಲಿ ಸ್ಪಷ್ಟನೆ

Health

ವಯಸ್ಕರಲ್ಲಿ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ; ಐಸಿಎಂಆರ್-ಏಮ್ಸ್ ವರದಿಯಲ್ಲಿ ಸ್ಪಷ್ಟನೆ

Public TV
Last updated: July 2, 2025 2:58 pm
Public TV
Share
2 Min Read
COVID Vaccines
SHARE

ನವದೆಹಲಿ: ವಯಸ್ಕರಲ್ಲಿ ಸಂಭವಿಸುತ್ತಿರುವ ದಿಢೀರ್‌ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ (COVID Vaccines) ಕಾರಣವಲ್ಲ ಎಂದು ಐಸಿಎಂ‌ಆರ್ ಮತ್ತು ಏಮ್ಸ್ ನಡೆಸಿದ ಜಂಟಿ ಅಧ್ಯಯನ ವರದಿ ಸ್ಪಷ್ಟಪಡಿಸಿದೆ. ಹೃದಯಾಘಾತಕ್ಕೆ ಬದಲಾದ ಜೀವನ ಶೈಲಿ, ಆನುವಂಶಿಕ ಹಿನ್ನಲೆಗಳು ಕಾರಣ ಎಂದು ವರದಿ ವಿವರಿಸಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Ministry of Health and Family Welfare) ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಯುವ ಜನರಲ್ಲಿ ಕೋವಿಡ್ -19 ಲಸಿಕೆಗಳು ಮತ್ತು ಹೃದಯಾಘಾತದ (Heart Attack) ನಡುವೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಭಾರತೀಯ ರೈಲ್ವೆ ಇಲಾಖೆಯಿಂದ RailOne ಆಪ್‌ ಬಿಡುಗಡೆ- ಏನೆಲ್ಲಾ ಸೇವೆ ಲಭ್ಯವಿದೆ?

Heart Attack 04

ಐಸಿಎಂಆರ್‌ನ ರಾಷ್ಟ್ರೀಯ ಸಾಂಕ್ರಾಮಿಕ ರೋಗ ವಿಜ್ಞಾನ ಸಂಸ್ಥೆ (NIE) ಮೇ-ಆಗಸ್ಟ್ 2023ರ ನಡುವೆ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 47 ಆಸ್ಪತ್ರೆಗಳಲ್ಲಿ ʻFactors associated with unexplained sudden deaths among adults aged 18–45 years in Indiaʼ ಎಂಬ ಶೀರ್ಷಿಕೆಯಡಿಯಲ್ಲಿ ಮೊದಲ ಅಧ್ಯಯನ ನಡೆಸಿತು. ಈ ಅಧ್ಯಯನವು ಅಕ್ಟೋಬರ್ 2021 ರಿಂದ ಮಾರ್ಚ್ 2023ರ ನಡುವೆ ಸಂಭವಿಸಿದ ಹಠಾತ್ ಮರಣಗಳನ್ನು ವಿಶ್ಲೇಷಿಸಿತು. ಕೋವಿಡ್-19 ಲಸಿಕೆಯಿಂದ ಹಠಾತ್ ಮರಣದ ಅಪಾಯ ಹೆಚ್ಚುವುದಿಲ್ಲ ಎಂದು ಈ ಅಧ್ಯಯನ ತೋರಿಸಿದೆ. ಇದನ್ನೂ ಓದಿ: ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್‌ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ

HEART ATTACK
ಸಾಂದರ್ಭಿಕ ಚಿತ್ರ

2ನೇ ಅಧ್ಯಯನದಲ್ಲಿ ಏಮ್ಸ್ ದೆಹಲಿಯಲ್ಲಿ ಐಸಿಎಂಆರ್‌ನ ಸಹಯೋಗದೊಂದಿಗೆ ʻEstablishing the cause in sudden unexplained deaths in youngʼ ಎಂಬ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರುವ ಸಂಶೋಧನೆಯು ಯುವಕರಲ್ಲಿ ಹಠಾತ್ ಮರಣದ ಕಾರಣಗಳನ್ನು ಗುರುತಿಸುತ್ತಿದೆ. ಪ್ರಾಥಮಿಕ ಫಲಿತಾಂಶಗಳು ಹೃದಯಾಘಾತ (myocardial infarction), ಆನುವಂಶಿಕ ಕಾರಣಗಳು ಮತ್ತು ಅನಾರೋಗ್ಯಕರ ಜೀವನಶೈಲಿಯನ್ನು ಪ್ರಮುಖ ಕಾರಣಗಳಾಗಿ ಗುರುತಿಸಿವೆ. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

ಈ ವರದಿಗಳ ಬೆನ್ನಲೆ ಕೊವಿಡ್-19 ಲಸಿಕೆಯನ್ನು ಹೃದಯಾಘಾತಕ್ಕೆ ಸಂಬಂಧಿಸುವ ಯಾವುದೇ ವೈಜ್ಞಾನಿಕ ಪುರಾವೆ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಲಸಿಕೆಯ ಬಗ್ಗೆ ಆಧಾರ ರಹಿತ ಆರೋಪಗಳು ಸಾರ್ವಜನಿಕರಲ್ಲಿ ಭಯವನ್ನುಂಟುಮಾಡಿ, ಲಸಿಕೆಯ ವಿರುದ್ಧ ಗೊಂದಲ ಸೃಷ್ಟಿಸಬಹುದು, ಇದು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಅದು ಹೇಳಿದೆ. ಇದನ್ನೂ ಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

corona covid

ವರದಿಗಳ ಪ್ರಕಾರ ಹೃದಯಾಘಾತಕ್ಕೆ ಕಾರಣ ಏನು?
* ಆನುವಂಶಿಕ ಕಾರಣಗಳು: ಆನುವಂಶಿಕ ರೋಗಗಳು ಮತ್ತು ಹೃದಯ ಸಂಬಂಧಿತ ಕಾಯಿಲೆಗಳ ಕುಟುಂಬ ಇತಿಹಾಸ
* ಜೀವನಶೈಲಿ: ಧೂಮಪಾನ, ಮದ್ಯಪಾನ, ಔಷಧಿಗಳ ಬಳಕೆ ಮತ್ತು ತೀವ್ರವಾದ ದೈಹಿಕ ಒತ್ತಡ.
* ಪೂರ್ವ-ಅಸ್ತಿತ್ವದಲ್ಲಿರುವ ಆರೋಗ್ಯ ಸಮಸ್ಯೆಗಳು: ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು.
* ಕೊವಿಡ್-ನಂತರದ ತೊಡಕುಗಳು: ಕೊವಿಡ್-19 ಸೋಂಕಿನಿಂದ ಉಂಟಾಗುವ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳಿಂದ ಹೃದಯಾಘಾತ ಸಂಭವಿಸಿರಬಹುದು.

TAGGED:aiimsCovid 19Covid vaccinesheart attackICMRSudden Deathsಏಮ್ಸ್ಐಸಿಎಂಆರ್ಕೊರೊನಾ ವೈರಸ್ಕೋವಿಡ್‌ ಲಸಿಕೆಹೃದಯಾಘಾತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
13 minutes ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
20 minutes ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
36 minutes ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
1 hour ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?