ನವದೆಹಲಿ: ಹಠಾತ್ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳಿಗೆ ಕೊರೊನಾ ವ್ಯಾಕ್ಸಿನ್ (Covid Vaccine) ಕಾರಣವಲ್ಲ ಎಂದು ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಹೇಳಿದೆ. ತಮ್ಮ ಕೋವಿಶೀಲ್ಡ್ (Covishield) ಲಸಿಕೆ ಸುರಕ್ಷಿತವಾಗಿದೆ ಎಂದು ಇದೇ ವೇಳೆ ಅದು ಸ್ಪಷ್ಟಪಡಿಸಿದೆ.
ಸೀರಮ್ ಇನ್‌ಸ್ಟಿಟ್ಯೂಟ್ ತಮ್ಮ ಔಷಧವು ಕೋವಿಡ್ 19 ವಿರುದ್ಧ ರಕ್ಷಣೆ ನೀಡುವಲ್ಲಿ ಪರಿಣಾಮಕಾರಿಯಾಗಿದೆ. ಕೋವಿಶೀಲ್ಡ್ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ವಿಶ್ವಾದ್ಯಂತ ಹಲವಾರು ಕ್ಲಿನಿಕಲ್ ಪರೀಕ್ಷೆಗಳು ಮತ್ತು ನಿಯಂತ್ರಕ ಸಂಸ್ಥೆಗಳ ಮೌಲ್ಯಮಾಪನದಿಂದ ದೃಢೀಕರಿಸಲಾಗಿದೆ. ಲಸಿಕೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ದುಷ್ಪರಿಣಾಮಗಳಿಗೆ ವೈಜ್ಞಾನಿಕ ಆಧಾರವಿಲ್ಲ ಎಂದು ಸಂಸ್ಥೆ ವಾದಿಸಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ – ನಾಲ್ವರು ಮೊಮ್ಮಕ್ಕಳಿಗೆ ಬೈಪಾಸ್ ಸರ್ಜರಿ!
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇತ್ತೀಚೆಗೆ ರಾಜ್ಯದಲ್ಲಿ ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡ ಕೆಲವರು ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಈ ಹೇಳಿಕೆಯು ಸಾರ್ವಜನಿಕರಲ್ಲಿ ಗೊಂದಲ ಮತ್ತು ಚರ್ಚೆಗೆ ಕಾರಣವಾಗಿತ್ತು. ಆದರೆ ಸೀರಂ ತನ್ನ ಲಸಿಕೆಯ ಸುರಕ್ಷತೆಯನ್ನು ಪುನರುಚ್ಚರಿಸಿದ್ದು, ಇಂತಹ ಆರೋಪಗಳಿಗೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಹೆಚ್ಚುತ್ತಿರುವ ಹೃದಯಾಘಾತ – ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ
ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಭಾರತದ ಔಷಧ ನಿಯಂತ್ರಣ ಸಂಸ್ಥೆಗಳಂತಹ ಸಂಸ್ಥೆಗಳು ಕೋವಿಶೀಲ್ಡ್ ಲಸಿಕೆಯನ್ನು ವ್ಯಾಪಕವಾಗಿ ಬಳಕೆಗೆ ಅನುಮೋದಿಸಿವೆ. ಈ ಲಸಿಕೆಯು ಭಾರತದ ಕೋವಿಡ್-19 ಲಸಿಕಾ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಕೋಟ್ಯಂತರ ಜನರಿಗೆ ರಕ್ಷಣೆ ನೀಡಿದೆ ಎಂದು ತಿಳಿಸಿದೆ.
ಆತಂಕ ಮೂಡಿಸುವ ಯಾವುದೇ ಆಧಾರರಹಿತ ಹೇಳಿಕೆಗಳಿಗೆ ಜನರು ಭಯ ಪಡಬಾರದು. ಒಳಗಾಗದಂತೆ ಮನವಿ ಮಾಡಿದ್ದು, ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ವೈಜ್ಞಾನಿಕ ಮಾಹಿತಿಯನ್ನು ಅವಲಂಬಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದೆ.