ಬೆಂಗಳೂರು: ಲಾಕ್‌ಡೌನ್‌ನಿಂದ ಸೋಂಕು ನಿಯಂತ್ರಣ ಆಗಲ್ಲ. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ಮೂಲಕ ಸೋಂಕು ನಿಯಂತ್ರಣ ಆಗುವುದಿಲ್ಲ. ಎರಡು ಬಾರಿ ಲಾಕ್‌ಡೌನ್ ಮಾಡಿ ಜನರಿಗೆ ಸಮಸ್ಯೆ ಆಗಿದೆ. ನಿನ್ನೆ ಮೋದಿ ಅವರು ಕೂಡಾ ಆರ್ಥಿಕ ನಷ್ಟ ಆಗದಂತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ಲಾಕ್‌ಡೌನ್‌ನಂತಹ ನಿಯಮ ಇಲ್ಲದೆ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ. ಲಸಿಕೆ ತೆಗೆದುಕೊಳ್ಳಿ, ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ. ಬಹಿರಂಗ ಸಮಾವೇಶ, ಗುಂಪು ಸೇರುವುದು ಮಾಡಬೇಡಿ. ಒಂದೂವರೆ ತಿಂಗಳು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ – ಹೈ ರಿಸ್ಕ್ ಪಟ್ಟಿಯಲ್ಲಿದೆ 9 ವಾರ್ಡ್‌ಗಳು
Advertisement
Advertisement
ಇಂದಿನಿಂದ ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿ ವಿಚಾರವಾಗಿ ಮಾತನಾಡಿ, ಈ ತಿಂಗಳು ನಿಯಮ ಮುಂದುವರೆಯುತ್ತದೆ. ಇವತ್ತು ಎರಡನೇ ವೀಕೆಂಡ್ ಕರ್ಫ್ಯೂ ಜಾರಿ ಆಗಲಿದೆ. ಜನ ಸಹಕಾರ ನೀಡಬೇಕು. ಅನೇಕ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. ಯಾರು ಕೂಡ ಉದಾಸೀನ ಮಾಡಬಾರದು. ರಾಜ್ಯದಲ್ಲಿ ಕೊರೊನಾ ಇನ್ನು ಪೀಕ್‌ಗೆ ಹೋಗಿಲ್ಲ. ತಜ್ಞರು ಕೂಡಾ ಇದನ್ನ ಹೇಳಿದ್ದಾರೆ. ಫೆಬ್ರವರಿ ಮೊದಲ ವಾರ ಸೋಂಕು ಹೆಚ್ಚಳವಾಗುತ್ತದೆ. 3-4ನೇ ವಾರದಿಂದ ಕಡಿಮೆ ಆಗುತ್ತೆ ಅಂತ ತಜ್ಞರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಆದರೂ ಶೇ.5ರಿಂದ 6 ರಷ್ಟು ಮಂದಿ ಮಾತ್ರ ಆಸ್ಪತ್ರೆ ಸೇರುತ್ತಿರುವುದು ಸಮಾಧಾನದ ವಿಷಯ. ನರ್ಸ್‌ಗಳು ಕೂಡಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಮತ್ತಷ್ಟು ಎಚ್ಚರಿಕೆ ಅವಶ್ಯಕತೆ ಇದೆ. ನಾವು ನಿತ್ಯ ಸಭೆ ಮಾಡುತ್ತಿದ್ದೇವೆ. ಹೆಚ್ಚು ಸೋಂಕು ಇರುವ ಜಿಲ್ಲಾಡಳಿತಗಳ ಜೊತೆ ಇಂದು ಸಭೆ ಮಾಡುತ್ತೇನೆ. ಮೋದಿ ಅವರು ಕೊಟ್ಟ ಸಲಹೆಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉತ್ತುಂಗದಲ್ಲಿರುವ ಕೋವಿಡ್ ಸೋಂಕು: ಮೂರನೇ ಅಲೆ ಶೀಘ್ರವೇ ಅಂತ್ಯ?
Advertisement
ಕಳೆದ ವಾರದಿಂದ ವೀಕೆಂಡ್ ಲಾಕ್ ಮಾಡಿದ್ದೇವೆ. 7 ದಿನಕ್ಕೆ ಸೋಂಕು ಕಡಿಮೆ ಆಗುವುದಿಲ್ಲ. ಮೊದಲ ಎರಡು ಅಲೆಯಲ್ಲಿ 14 ದಿನಗಳ ಚೈನ್ ಇತ್ತು. ಆದರೆ ಈ ಅಲೆಯಲ್ಲಿ ಸ್ವಲ್ಪ ಕಡಿಮೆ ಇದೆ. ಈ ಸೋಂಕು 5-6 ಪಟ್ಟು ವೇಗವಾಗಿ ಹರಡುತ್ತಿದೆ. ಹೀಗಾಗಿ ಇನ್ನೂ ಸ್ವಲ್ಪ ದಿನ ಹೋದರೆ ವೀಕೆಂಡ್ ಕರ್ಫ್ಯೂ ಫಲಿತಾಂಶ ಸಿಗಬಹುದು ಎಂದಿದ್ದಾರೆ.