Connect with us

Latest

ಭಾನುವಾರ ನಮಗೂ ರಜೆ ಆದರೂ ವಿಚಾರಣೆ ಮಾಡುತ್ತಿದ್ದೇವೆ – ಸುಪ್ರೀಂ ಕೋರ್ಟ್

Published

on

ನವದೆಹಲಿ: ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸೋಮವಾರ ಬೆಳಗ್ಗೆ ಎರಡು ಮುಖ್ಯ ದಾಖಲೆಗಳನ್ನು ಹಾಜರುಪಡಿಸುವಂತೆ ಸಾಲಿಸೀಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಬಹುಮತ ಇಲ್ಲದಿದ್ದರೂ ಫಡ್ನಾವಿಸ್ ಸರ್ಕಾರ ರಚನೆಗೆ ಅವಕಾಶ ಕೊಟ್ಟ ರಾಜ್ಯಪಾಲರ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‍ಸಿಪಿ ಪ್ರತ್ಯೇಕವಾಗಿ ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಿದ್ದ ತುರ್ತು ಅರ್ಜಿಯ ವಿಚಾರಣೆ ಇಂದು ನ್ಯಾ.ಎನ್‍ವಿ ರಮಣ, ಅಶೋಕ್ ಭೂಷಣ್, ಸಂಜೀವ್ ಖನ್ನಾ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು.

ವಿಚಾರಣೆ ನಡೆಸಿದ ಪೀಠ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆ ಮಾಡುವಂತೆ ಆಹ್ವಾನಿಸಿದ ಪತ್ರ ಮತ್ತು ಸರ್ಕಾರ ರಚನೆ ಮಾಡಲು ದೇವೇಂದ್ರ ಫಡ್ನಾವೀಸ್ ಅವರಿಗೆ ಇರುವ ಅಗತ್ಯ ಸಂಖ್ಯೆಯ ಶಾಸಕರ ಸಹಿಯುಳ್ಳ ಪತ್ರವನ್ನು ಪೀಠದ ಮುಂದೆ ಹಾಜರುಪಡಿಸುವಂತೆ ಪೀಠ ತುಷಾರ್ ಮೆಹ್ತಾ ಅವರಿಗೆ ಸೂಚಿಸಿತು.

ಈ ಅರ್ಜಿಯ ವಿಚಾರಣೆ ವೇಳೆ ಅವಕಾಶ ನೀಡಿದರೆ ನಾವೇ ಬಹುಮತ ಸಾಬೀತು ಮಾಡ್ತೇವೆ ಯಾಕೆ ಎಲ್ಲರೂ ತೊಂದರೆ ತೆಗೆದುಕೊಳ್ಳುತ್ತೀರಿ ಎಂದು ಬಿಜೆಪಿ ಮತ್ತು  ಬಿಜೆಪಿಗೆ ಬೆಂಬಲ ನೀಡಿದ ಶಾಸಕರ ಪರವಾಗಿ  ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ಅಷ್ಟೇ ಅಲ್ಲದೇ ಈ ಪ್ರಕರಣ ವಿಚಾರಣೆಗೆ ಅರ್ಹವಲ್ಲ. ಭಾನುವಾರ ರಜೆ ಇದೆ. ಹೀಗಾಗಿ ತುರ್ತು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಮನವಿ ಮಾಡಿದರು.

ಈ ವೇಳೆ ನ್ಯಾ.ಎನ್‍ವಿ ರಮಣ ಅವರು, ಭಾನುವಾರ ನಮಗೂ ರಜೆ. ಆದರೆ ಮುಖ್ಯ ನ್ಯಾಯಾಧೀಶರು ತುರ್ತು ಅರ್ಜಿ ವಿಚಾರಣೆ ನಡೆಸಬೇಕು ಎಂದು ನಮಗೆ ಸೂಚಿಸಿದ್ದಾರೆ. ಹೀಗಾಗಿ ನಾವು ವಿಚಾರಣೆ ನಡೆಸುತ್ತೇವೆ ಎಂದು ಹೇಳಿದಾಗ ಕಲಾಪ ಒಮ್ಮೆ ನಗೆಗಡಲಲ್ಲಿ ತೇಲಿತು.

ಶಿವಸೇನೆ ಪರವಾಗಿ ವಾದ ಮಂಡಿಸಿದ ಕಪಿಲ್ ಸಿಬಲ್, ಕಳೆದ ವರ್ಷ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಒಂದು ದಿನದ ಒಳಗಡೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ್ದನ್ನು ಉಲ್ಲೇಖಿಸಿ, ರಾಜ್ಯಪಾಲರ ನಿರ್ಧಾರ ಸರಿಯಲ್ಲ. ಯಾವ ದಾಖಲೆಗಳು ಇಲ್ಲದೇ ಪ್ರಕ್ರಿಯೆ ಅನುಸರಿಸದೇ ಸರ್ಕಾರ ರಚನೆ ಆಗಿದೆ. ರಾಷ್ಟ್ರಪತಿ ಆಡಳಿತ ತೆರವಿನ ಕೆಲವೇ ಕ್ಷಣಗಳಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ಅವರಿಗೆ ಬಹುಮತ ಇದ್ದರೇ ಸಾಬೀತು ಮಾಡಲಿ. ಅವಸರವಾಗಿ ಯಾಕೆ ಪ್ರಮಾಣ ವಚನ ಸ್ವೀಕರಿಸಬೇಕು ಕೂಡಲೇ ಸುಪ್ರೀಂ ಬಹುಮತ ಸಾಬೀತಿಗೆ ಆದೇಶ ನೀಡಬೇಕೆಂದು ಮನವಿ ಮಾಡಿದರು.

Click to comment

Leave a Reply

Your email address will not be published. Required fields are marked *