ಬೆಂಗಳೂರು: ಮುಡಾ (MUDA) ಪ್ರಕರಣ ಸಂಬಂಧ ಸಿಎಂ ವಿರುದ್ಧ ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ತಿಳಿಸಿದರು.
ಹೈಕೋರ್ಟ್ ತೀರ್ಪು ನೀಡಿದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಸಿಎಂ ಮೇಲೆ ದೊಡ್ಡ ಷಡ್ಯಂತ್ರ ನಡೆದಿದೆ. ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ. ಏನು ಹಿನ್ನಡೆಯಾಗಿದೆ? ಆದೇಶ ಏನಿದೆ ನೋಡುತ್ತೇನೆ. ಸಿಎಂ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಆದರೆ ನಾವು ಸಿಎಂ ಪರ ಇದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದರು.ಇದನ್ನೂ ಓದಿ: ಡಿಕೆಶಿಗೆ ಸಿಎಂ ಆಗುವ ಅವಕಾಶ ಬಂದೇ ಬರುತ್ತೆ: ಶಾಸಕ ಬಸವರಾಜ್ ಶಿವಗಂಗಾ
Advertisement
Advertisement
ನನ್ನ ವಿರುದ್ಧವೂ ಹೀಗೆಯೇ ಷಡ್ಯಂತ್ರ ನಡೆದಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ್ದರು. ಈಗ ಆ ಕೇಸ್ ಏನಾಗಿದೆ? ಹಾಗೆಯೇ ಸಿಎಂ ವಿರುದ್ಧವೂ ಷಡ್ಯಂತ್ರ ನಡೆದಿದೆ. ಏನೇ ಆಗಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
ಮುಡಾ (Mysuru Urban Development Authority) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.ಇದನ್ನೂ ಓದಿ: ಸಿದ್ದರಾಮಯ್ಯನವರು ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಲಿ, ರಾಜೀನಾಮೆ ಕೊಡುವುದೊಂದೇ ದಾರಿ: ಸಿ.ಟಿ.ರವಿ