ಬೆಂಗಳೂರು: ಅಸಮರ್ಥ ಕಾಂಗ್ರೆಸ್ (Congress) ಸರ್ಕಾರಕ್ಕೆ ಧನ್ಯವಾದಗಳು. ನಂದಿನಿ ಇನ್ನು ಮುಂದೆ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು (Tirupati Laddu) ತಯಾರಿಸಲು ತುಪ್ಪವನ್ನು ಪೂರೈಸುವುದಿಲ್ಲ ಎಂದು ಹೇಳಿ ಸಿಟಿ ರವಿ (CTRavi) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಂದಿನಿ (Nandini) ವಿಷಯವನ್ನು ನಾಚಿಕೆಯಿಲ್ಲದೆ ರಾಜಕೀಯ ಮಾಡಿ ಅಮುಲ್ (Amul)ದೂಷಿಸಲು ಹಾಲುಣಿಸಿತು. ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರವು ಹಾಲಿನ ದರವನ್ನು ಹೆಚ್ಚಿಸಿತು. ಇದರಿಂದಾಗಿ ನಂದಿನಿಯು ಟಿಟಿಡಿ (TTD) ಮಂಡಳಿಗೆ ತುಪ್ಪವನ್ನು ಹಿಂದಿನ ಬೆಲೆಗೆ ಪೂರೈಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ನಂದಿನಿ ಇನ್ನು ಮುಂದೆ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು ತಯಾರಿಸಲು ತುಪ್ಪವನ್ನು ಪೂರೈಸುವುದಿಲ್ಲ. ಕಾಂಗ್ರೆಸ್ ತನ್ನ ಅಜೆಂಡಾವನ್ನು ಅನುಸರಿಸಲು ಸುವರ್ಣ ಕರ್ನಾಟಕವನ್ನು ನಾಶಮಾಡಲು ಹವಣಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಡುಪಿ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್, ಬೆದರಿಕೆ
ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಕೆಎಂಎಫ್‌ನಿಂದ (KMF) ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತ ಮಾಡಿದೆ. ಇದರಿಂದಾಗಿ ವಿಶ್ವ ಪ್ರಸಿದ್ಧ ಲಾಡುಗಳಲ್ಲಿ ಇನ್ನು ಮುಂದೆ ನಂದಿನಿ ತುಪ್ಪದ ಘಮ ಇರುವುದಿಲ್ಲ. ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿದ ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಭೀಮಾನಾಯ್ಕ್, ಕೆಎಂಎಫ್ ಸಲ್ಲಿಸಿದ ತುಪ್ಪದ ದರ ಪ್ರಸ್ತಾವನೆಯನ್ನು ಟಿಟಿಡಿ ಒಪ್ಪಿಕೊಂಡಿಲ್ಲ. ತಿರುಮಲ ಆಡಳಿತ ಮಂಡಳಿ ನಿಗದಿ ಮಾಡಿದ ಬೆಲೆಗೆ ತುಪ್ಪ ಪೂರೈಕೆ ಮಾಡಲು ಸಾಧ್ಯವಾಗದ ಕಾರಣ ಟೆಂಡರ್‌ನಿಂದ ಕೆಎಂಎಫ್ ದೂರ ಉಳಿದಿದೆ ಎಂದಿದ್ದಾರೆ.
ಆರು ತಿಂಗಳಿಗೆ 14 ಲಕ್ಷ ಕೆಜಿ ತುಪ್ಪ ನಂದಿನಿಯಿಂದ ಸರಬರಾಜು ಆಗುತ್ತಿತ್ತು. ಈ ಹಿಂದೆ ರಿಯಾಯಿತಿ ದರದಲ್ಲಿ ತಿಮ್ಮಪ್ಪನ ಸನ್ನಿಧಿಗೆ ತುಪ್ಪ ಹೋಗುತ್ತಿತ್ತು. ಆದರೆ ಈಗ ಕೆಎಂಎಫ್ ಹಾಲಿನ ಬೆಲೆ ಏರಿಕೆ ಮಾಡಿದ್ದರಿಂದ ತಪ್ಪದ ದರವನ್ನು ಏರಿಸಿತ್ತು. ದರದ ಗೊಂದಲದಿಂದ ಟೆಂಡರ್‌ನಲ್ಲಿ ಕೆಎಂಎಫ್ ಭಾಗವಹಿಸರಲಿಲ್ಲ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]