ಭೋಪಾಲ್: ಶೀಘ್ರದಲ್ಲಿಯೇ ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುವುದಾಗಿ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ (Uma bharati) ಹೇಳಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಉಮಾಭಾರತಿ ಭೋಪಾಲ್‍ನಲ್ಲಿ ಕ್ಷೇತ್ರ ಭೇಟಿ ಮಾಡುತ್ತಿದ್ದಾರೆ. ಕ್ಷೇತ್ರ ಭೇಟಿಯ ಕೊನೆಯ ದಿನವಾದ ಇಂದು ರಾಜ್ಯದಲ್ಲಿ ಆಲ್ಕೋಹಾಲ್ (Alcohol) ಅನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಮದ್ಯದಂಗಡಿಗಳಲ್ಲಿ ಗೋ ಶಾಲೆ (Cow Sheltar) ಆರಂಭಿಸುವುದಾಗಿ ಘೋಷಿಸಿದರು. ಅಲ್ಲದೆ ರಾಜ್ಯ ಸರ್ಕಾರ ಮದ್ಯನೀತಿಯ ಕುರಿತು ಘೋಷಣೆ ಮಾಡಲು ತಡಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಓರ್ಚಾದಲ್ಲಿರುವ ಮದ್ಯದಂಗಡಿ ಹೊರಗೆ 11 ಹಸುಗಳನ್ನು ಕಟ್ಟಿಹಾಕಲು ವ್ಯವಸ್ಥೆ ಮಾಡಲು ತಿಳಿಸಿದ್ದೇನೆ. ಅಲ್ಲದೆ ಅವುಗಳಿಗೆ ಮೇವು ಹಾಗೂ ನೀರಿನ ವಯವಸ್ಥೆಯನ್ನೂ ಮಾಡಲು ತಿಳಿಸಿದ್ದೇನೆ. ನನ್ನನ್ನು ತಡೆಯುವ ಧೈರ್ಯ ಯಾರಿಗಿದೆ ಎಂದು ನೋಡೋಣ ಎಂದು ಸವಾಲೆಸೆದರು. ಇದನ್ನೂ ಓದಿ: ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ
Advertisement
Advertisement
ಭಗವಾನ್ ಶ್ರೀರಾಮಚಂದ್ರನ ಹೆಸರಿನಲ್ಲಿ ಸರ್ಕಾರಗಳು ರಚನೆಯಾಗುತ್ತಿವೆ. ಆದರೆ ಓರ್ಚಾದಲ್ಲಿರುವ ರಾಮರಾಜ ದೇವಸ್ಥಾನದ ಬಳಿ ಮದ್ಯದಂಗಡಿ (Liquor Shop) ಯನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿರುವುದು ಬೇಸರದ ಸಂಗತಿ. ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶವು ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದಲ್ಲಿ ಮುಂಚೂಣಿಯಲ್ಲಿದೆ. ಈ ಹಿಂಸೆಯ ಪ್ರವೃತ್ತಿಗೆ ಮದ್ಯ ಸೇವನೆಯು ಒಂದು ಕಾರಣ ಎಮದು ಅವರು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k