ನವದೆಹಲಿ: ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚನೆ ಮಾಡಿ ಲಂಡನ್‍ಗೆ ಪರಾರಿಯಾಗಿರುವ ಮದ್ಯದೊರೆ ವಿಜಯ್ ಮಲ್ಯನನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್ ಕೋರ್ಟ್ ದೇಶದಲ್ಲಿರುವ ಜೈಲುಗಳ ಸ್ಥಿತಿಗತಿಗಳ ಬಗ್ಗೆ ತಿಳಿಸುವಂತೆ ಸೂಚಿಸಿದೆ.
ಕೋಟ್ಯಾಂತರ ರೂಪಾಯಿ ಸಾಲ ಮಾಡಿ ಭಾರತದಿಂದ ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್‍ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯದಲ್ಲಿ ವಿಚಾರಣೆ ಕೈಗೆತ್ತಿಕೊಂಡಿದೆ.
Advertisement
ಭಾರತಕ್ಕೆ ಹಸ್ತಾಂತರಿಸುವ ಕುರಿತು ವಿಜಯ್ ಮಲ್ಯ ಪರ ವಕೀಲರು, ಭಾರತದಲ್ಲಿನ ಜೈಲುಗಳಲ್ಲಿ ಸರಿಯಾದ ಗಾಳಿ-ಬೆಳಕು ಇಲ್ಲ. ಹೀಗಾಗಿ ಹಸ್ತಾಂತರ ಮಾಡಲು ಅನುಮತಿ ನೀಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು.
Advertisement
Advertisement
ಈ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು, ವ್ಯಕ್ತಿಯೊಬ್ಬ ಜೈಲಿನೊಳಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಚಿತ್ರಿಸಿ ಕಳುಹಿಸಿ. ಅದು ಮಧ್ಯಾಹ್ನದ ಹೊತ್ತಿನಲ್ಲಿ ಸೂರ್ಯನ ಬೆಳಕು ಜೈಲಿನಲ್ಲಿ ಅಗಾಧವಾಗಿ ಪ್ರವೇಶಿಸುವಂತಿರಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.
Advertisement
ಭಾರತ ಸರ್ಕಾರದ ಪರ ವಾದಿಸಿದ ವಕೀಲ ಮಾರ್ಕ್ ಸಮ್ಮರ್, ಮಾನವ ಹಕ್ಕು ಆಯೋಗ ನಿಗದಿಪಡಿಸಿದ ಮಾನದಂಡದ ಆಧಾರದಲ್ಲಿ ಜೈಲುಗಳನ್ನು ನಿರ್ಮಿಸಲಾಗಿದೆ. ವಿಜಯ್ ಮಲ್ಯ ಕೂಡಿ ಹಾಕುವ ಬ್ಯಾರಕ್ ನಲ್ಲಿ ಶುದ್ಧವಾದ ಗಾಳಿ ಬೆಳಕು ಇರಲಿದೆ. ಅಷ್ಟೇ ಅಲ್ಲದೇ ಪಾಶ್ಚಿಮಾತ್ಯ ಶೈಲಿಯ ಶೌಚಾಲಯ, ಶುಭ್ರವಾದ ಬೆಡ್ ನೀಡಲಾಗುವುದು ಎಂದು ತಿಳಿಸಿದರು.
ಮುಂಬೈನ ಆರ್ಥರ್ ರೋಡ್ ಜೈಲಿನ ವಿಡಿಯೋಗಳನ್ನು ಸಲ್ಲಿಸುವಂತೆ ತಿಳಿಸಿದ್ದು, ಮುಂದಿನ ವಿಚಾರಣೆಯಲ್ಲಿ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಮದ್ಯದೊರೆ ಮಲ್ಯಗೆ 6 ವಾರಗಳ ಸಮಯ ಬಿಗ್ ರಿಲೀಫ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಪರ ವಾದಿಸುತ್ತಿರುವ ವಕೀಲರ ತಂಡ ಮುಂಬೈ ಅರ್ಥರ್ ರೋಡ್ ಜೈಲಿನ ಫೋಟೋಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಭಾರತ ಸರ್ಕಾರ ಪರ ಆದೇಶ ನೀಡಿದರೆ, ವಿಜಯ ಮಲ್ಯ ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿದೆ.