ಮೈಸೂರು: ಮಾಜಿ ಸಂಸದ ಎಚ್. ವಿಶ್ವನಾಥ್ ಅವರು ಜೆಡಿಎಸ್‍ಗೆ ಸೇರ್ಪಡೆಯಾಗಿರುವುದರಿಂದ ಯಾವುದೇ ರೀತಿಯ ಅಸಮಾಧಾನ ಉಂಟಾಗಿಲ್ಲ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ, ದೇವೇಗೌಡರು ಹೇಳುವ ಮಾತೇ ಅಂತಿಮ ಎಂದು ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
Advertisement
ಇಂದು ಮೈಸೂರಿನಲ್ಲಿ ಆಷಾಢ ಶುಕ್ರವಾರದ ಪ್ರಯುಕ್ತ ನಾಡಿನ ಆಧಿದೇವತೆ ಚಾಮುಂಡೇಶ್ವರಿ ದೇವಿಗೆ ಪತ್ನಿ ಜೊತೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ಯಾವುದೇ ರೀತಿಯ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ. ಜೆಡಿಎಸ್ ಪಕ್ಷಕ್ಕೆ ಸಂಬಂಧಿಸಿದಂತೆ ಪುತ್ರ ಪ್ರಜ್ಚಲ್ ನೀಡಿರುವ ಹೇಳಿಕೆಗೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ, ದೇವೇಗೌಡರು ಹೇಳುವ ಮಾತೇ ಅಂತಿಮ, ಅವರ ಮಾತನ್ನು ಯಾರೂ ಮೀರುವುದಿಲ್ಲ. ಜೆಡಿಎಸ್ ನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಅಂದ್ರು.
Advertisement
Advertisement
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಮಾಜಿ ಸಂಸದ ಎಚ್. ವಿಶ್ವನಾಥ್ ಅವರು ಜೆಡಿಎಸ್‍ಗೆ ಸೇರ್ಪಡೆಯಾಗಿರುವುದರಿಂದ ಯಾವುದೇ ರೀತಿಯ ಅಸಮಾಧಾನ ಉಂಟಾಗಿಲ್ಲ. ಅವರು ಹಿರಿಯ ರಾಜಕೀಯ ನಾಯಕರು, ಅವರ ಸೇರ್ಪಡೆಯಿಂದ ಜೆಡಿಎಸ್ ಗೆ ಮತ್ತಷ್ಟು ಬಲ ಬಂದಿದೆ ಎಂದು ಹೇಳಿದರು.
Advertisement
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಸ್ಫೋಟದಿಂದ ತೆನೆಯಲ್ಲಿ ತಳಮಳ- ಮೊಮ್ಮಗನ ಮೇಲೆ ದೇವೇಗೌಡ್ರು ಬೇಸರ