ನವದೆಹಲಿ: ಕಾರುಗಳಲ್ಲಿ ಒಂಟಿಯಾಗಿ ಸಂಚರಿಸುವವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ನಿರ್ಬಂಧಗಳನ್ನು ಪರಿಶೀಲಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಶುಕ್ರವಾರ ಸಭೆ ನಡೆಸಿತ್ತು. ಈ ಸಂದರ್ಭದಲ್ಲಿ ದೆಹಲಿಯಲ್ಲಿ ಕೋವಿಡ್ ನಿಯಮಗಳ ಬಗೆಗಿನ ಕೆಲವು ವಲಯಗಳಲ್ಲಿ ವಿನಾಯಿತಿ ದೊರಕಿದೆ.
Advertisement
ದೆಹಲಿಯಲ್ಲಿ ಒಂಟಿಯಾಗಿ ಕಾರಿನಲ್ಲಿ ಪ್ರಯಾಣಿಸುವವರಿಗೆ ಕೊನೆಗೂ ಮಾಸ್ಕ್‌ಗಳಿಂದ ಮುಕ್ತಿ ದೊರಕಿದೆ. ಏಕಾಂಗಿಯಾಗಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯ ಮಾಸ್ಕ್ ನಿಯಮವನ್ನು ತೆಗೆದು ಹಾಕಿದೆ. ಆದರೆ ಒಬ್ಬರಿಗಿಂತ ಹೆಚ್ಚು ಮಂದಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್ ಹಾಕಿಕೊಳ್ಳಲೇ ಬೇಕು ಎಂದು ದೆಹಲಿ ಸರ್ಕಾರ ಎಚ್ಚರಿಸಿದೆ. ಇದನ್ನೂ ಓದಿ: ನಕ್ಸಲ್ ನಿಗ್ರಹ ದಳ ಸಿಬ್ಬಂದಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿದ ಸರ್ಕಾರ
Advertisement
Advertisement
ಈ ಹಿಂದೆ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಜನರು ಒಂಟಿಯಾಗಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್ ಧರಿಸಬೇಕು ಎಂಬ ಯಾವುದೇ ನಿರ್ದೇಶನ ನೀಡಿರಲಿಲ್ಲ. ಹೀಗಾಗಿ ಮಾಸ್ಕ್ ಇಲ್ಲದೇ ಒಂಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಂದಲೂ ಪೊಲೀಸರು ದಂಡ ವಸೂಲಿ ಮಾಡುತ್ತಿದ್ದರು. ಇದನ್ನೂ ಓದಿ: ನಾಳೆಯಿಂದ ಥಿಯೇಟರ್ ಹೌಸ್ ಫುಲ್- ಸರ್ಕಾರದಿಂದ ಅನುಮತಿ
Advertisement
ದೆಹಲಿಯಲ್ಲಿ ಜಿಮ್ ಹಾಗೂ ಶಾಲೆಗಳನ್ನು ತೆರೆಯಲು ಸರ್ಕಾರ ಶುಕ್ರವಾರ ನಿರ್ಧರಿಸಿದೆ.