Connect with us

Bengaluru City

ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಇಲ್ಲ- 1 ದಿನಕ್ಕೆ ಆದೇಶ ವಾಪಸ್‌

Published

on

ಬೆಂಗಳೂರು: ರಾಜ್ಯದಲ್ಲಿ ಹೇರಲಾಗಿರುವ ನೈಟ್‌ ಕರ್ಫ್ಯೂ ಅನ್ನು ವಾಪಸ್‌ ಪಡೆಯಲಾಗಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಹೇಳಿಕೆಯನ್ನು ಬಿಡುಗಡೆ ಮಾಡಿ ತಿಳಿಸಿದ್ದಾರೆ.

ಹೇಳಿಕೆಯಲ್ಲಿ ಏನಿದೆ?
ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ.

Click to comment

Leave a Reply

Your email address will not be published. Required fields are marked *