ಮೈಸೂರು: ರಾಜ್ಯದಾದ್ಯಂತ ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Advertisement
ರಾಜ್ಯದಾದ್ಯಂತ ನೈಟ್ ಕರ್ಪ್ಯೂ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ಕ ಪಕ್ಕದ ಕೊರೊನಾ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ಉದ್ಯಮಿಗಳಿಗೆ ನಷ್ಟವಾಗುತ್ತದೆ ಅನ್ನೋದು ಗಮನಕ್ಕೆ ಬಂದಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: 7ರ ಬಾಲಕಿ ಮೇಲೆ ಅತ್ಯಾಚಾರ- ಹತ್ಯೆಗೈದವರಿಗಾಗಿ ಶೋಧ ಕಾರ್ಯ
Advertisement
Advertisement
ಫೆಬ್ರವರಿಯಲ್ಲಿ ಓಮಿಕ್ರಾನ್ ಜಾಸ್ತಿ ಆಗುತ್ತೆ ಅನ್ನೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ಕೇವಲ ಅಂದಾಜು ಮಾತ್ರ. ಅದಕ್ಕೆ ಯಾವುದೇ ಪುರಾವೆ ಇಲ್ಲ. ದೇಶಾದ್ಯಂತ ಓಮಿಕ್ರಾನ್ ಬಗ್ಗೆ ಕಟ್ಟೆಚ್ಚರಿಕೆ ವಹಿಸಲಾಗಿದೆ. ಯೂರೋಪ್ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಅದೇ ಆಧಾರದಲ್ಲಿ ತಜ್ಞರು ಹೇಳಿದ್ದಾರೆ. ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ಸೋಮವಾರ ಯಾದಗಿರಿಯಲ್ಲಿ ಚುನಾವಣೆ – ಪೊಲೀಸ್ ಇಲಾಖೆ ಸಜ್ಜು