ಬೆಂಗಳೂರು: ಸದ್ಯದವರೆಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ, ಬಂದರೆ ಉತ್ತರಿಸುತ್ತೇನೆ ಎಂದು ಶೋಕಾಸ್ ನೋಟಿಸ್ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಶಿಸ್ತು ಸಮಿತಿಯಿಂದ ನನಗೆ ನೋಟಿಸ್ ಕೊಡಲಾಗಿದೆ ಎನ್ನಲಾಗುತ್ತಿದೆ. ಆದರೆ ಸದ್ಯದವರೆಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಸಿಕ್ಕರೆ ಅದಕ್ಕೆ ಉತ್ತರಿಸುತ್ತೇನೆ. ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ ಬಗ್ಗೆ ತಿಳಿಸುತ್ತೇನೆ. ಸರ್ಕಾರದ ವಿರುದ್ಧ ಹೋರಾಡುವಲ್ಲಿ ಪಕ್ಷ ವಿಫಲವಾಗಿದೆ. ಹೊಂದಾಣಿಕೆ ರಾಜಕೀಯದ ಬಗ್ಗೆ ತಿಳಿಸುತ್ತೇನೆ ಎಂದಿದ್ದಾರೆ.ಇದನ್ನೂ ಓದಿ:ಸಮಜಾಯಿಷಿ ನೀಡಿದಂತೆ ನಡೆದುಕೊಂಡಿಲ್ಲ – ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ 2ನೇ ನೋಟಿಸ್
Advertisement
Advertisement
ಪೋಸ್ಟ್‌ನಲ್ಲಿ ಏನಿದೆ?
ನನಗೆ ಅಧಿಕೃತವಾಗಿ ಯಾವುದೇ ನೋಟಿಸ್ ಬಂದಿರುವುದಿಲ್ಲ. ನೋಟಿಸ್ ಬಂದಮೇಲೆ ಕೆಲವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕದ ಕಡೆಗಣನೆ, ಕುಟುಂಬ ರಾಜಕಾರಣ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ರಾಜ್ಯದ ಜನತೆಗೆ ವಿವರಿಸಲು ವಿಫಲವಾಗಿರುವ ಪಕ್ಷದ ಧೋರಣೆ, ಹೊಂದಾಣಿಕೆ ರಾಜಕೀಯ ಸೇರಿದಂತೆ ಸ್ವಜನಪಕ್ಷಪಾತದ ಬಗ್ಗೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರ ನೀಡುತ್ತೇನೆ ಎಂದು ಉಲ್ಲೇಖಿಸಿದ್ದಾರೆ.
Advertisement
ಭಾರತೀಯ ಜನತಾ ಪಕ್ಷದ ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳರಿಗೆ ನೋಟೀಸು ಬಂದಿದೆ ಎಂದು ಮಾಧ್ಯಮಗಳು ವಿಜೃಂಭಿಸುತ್ತಿದೆ.
ನನಗೆ ಅಧಿಕೃತವಾಗಿ ಯಾವುದೇ ನೋಟೀಸು ಬಂದಿರುವುದಿಲ್ಲ. ನೋಟೀಸು ಬಂದಮೇಲೆ ಕೆಲವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕದ ಕಡೆಗಣನೆ, ಕುಟುಂಬ ರಾಜಕಾರಣ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು…
— Basanagouda R Patil (Yatnal) (@BasanagoudaBJP) February 10, 2025
Advertisement
ಸೋಮವಾರ ಕೇಂದ್ರೀಯ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ ಎನ್ನಲಾಗಿತ್ತು. ನೋಟಿಸ್‌ನಲ್ಲಿ ಈ ಹಿಂದೆ ನೀಡಲಾಗಿದ್ದ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ದೀರಿ. ಮುಂದಿನ ದಿನಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ. ಆದರೆ ಸಮಜಾಯಿಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ. ಪಕ್ಷ ವಿರೋಧ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ಹೀಗಾಗಿ ಈ ಬಗ್ಗೆ 72 ಗಂಟೆಗಳಲ್ಲಿ ಸ್ಪಷ್ಟನೆ ನೀಡಬೇಕು ಎಂದು ಸೂಚನೆ ನೀಡಿತ್ತು ಎಂದು ಮೂಲಗಳು ತಿಳಿಸಿದ್ದವು.
ಇದಕ್ಕೂ ಮುನ್ನ ಕಳೆದ ವರ್ಷದ ಡಿಸೆಂಬರ್ 02 ರಂದು ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಮೊದಲ ಶೋಕಾಸ್ ನೋಟಿಸ್ ನೀಡಿತ್ತು. ಆಗ ಯತ್ನಾಳ್ ಬಹಿರಂಗ ಹೇಳಿಕೆ ಕೊಡುವುದಿಲ್ಲ ಎಂದು ಭರವಸೆ ನೀಡಿ, ಶೋಕಾಸ್ ನೋಟಿಸ್‌ಗೆ ಉತ್ತರಿಸಿದ್ದರು.ಇದನ್ನೂ ಓದಿ: ಸಿದ್ದರಾಮಯ್ಯ 660 ಕೆವಿ ಕರೆಂಟ್, ಮುಟ್ಟಿದ್ರೆ ಸುಟ್ಟು ಹೋಗ್ತಾರೆ: ಮುನಿರತ್ನ