ಕೋವಿಡ್ ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್-19 ವಿರುದ್ಧದ ಲಸಿಕೆಯನ್ನು ಪಡೆದುಕೊಳ್ಳುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಲಸಿಕೆ ಆದೇಶಗಳ ಮೂಲಕ ವ್ಯಕ್ತಿಗಳ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ಪ್ರಮಾಣೀಕರಣವೆಂದು ಕರೆಯಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಇದನ್ನೂ ಓದಿ: ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ – ಸಂಜಯ್ ಸರೋಗಿ
ಲಸಿಕೆಗಳ ಪ್ರತಿಕೂಲ ಪರಿಣಾಮಗಳ ಕುರಿತು ಜನರು ಮತ್ತು ವೈದ್ಯರಿಂದ ವರದಿಗಳನ್ನು ಸಂಗ್ರಹಿಸಿ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸುವುದರ ವಿರುದ್ಧದ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ದೇಶದಲ್ಲಿ ಕೋವಿಡ್-19 ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಮತ್ತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರಗಳು ಮುಂದಾಗಿವೆ. ಇದನ್ನೂ ಓದಿ: ಲ್ಯಾಂಡಿಂಗ್ ವೇಳೆ ಸ್ಪೈಸ್‌ಜೆಟ್ ವಿಮಾನ ಅವಘಡ – ಪ್ರಯಾಣಿಕರ ಮೇಲೆ ಲಗೇಜ್‌ಗಳ ಸುರಿಮಳೆ
ಈಗಾಗಲೇ ಅನೇಕ ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಸಾರ್ವಜನಿಕವಾಗಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಮಾಲ್ ಅಥವಾ ಇನ್ನಿತರ ತಾಣಗಳ ಪ್ರವೇಶಕ್ಕೆ ಎರಡು ಡೋಸ್ ಲಸಿಕೆ ಕಡ್ಡಾಯ ಎಂದು ತಿಳಿಸಲಾಗಿದೆ.