ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ವಿಜಯೇಂದ್ರ ಮುಂದೆ ಸಿಎಂ ಆಗೇ ಆಗುತ್ತಾರೆ ಎಂದು ಮಾಜಿ ಸಚಿವ ಕೆ.ಶಿವನಗೌಡ ನಾಯಕ್ (K Shivanagouda Naik) ಹೇಳಿದ್ದಾರೆ.ಇದನ್ನೂ ಓದಿ: ವಿಶೇಷ ಕಾರ್ಯಾಚರಣೆ – ರಾತ್ರಿ ಕುಡುಕರಿಗೆ ಚಳಿ ಬಿಡಿಸಿದ ಗದಗ್ ಎಸ್‌ಪಿ
Advertisement
ರಾಯಚೂರಿನ (Raichuru) ಮಾನ್ವಿಯಲ್ಲಿ (Manvi) ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಈಗ ರಾಜ್ಯಾಧ್ಯಕ್ಷರಾಗಿದ್ದಾರೆ. ಮುಂದೆ ಒಂದು ದಿನ ಸಿಎಂ ಆಗಬೇಕು. ಅಧಿಕಾರದ ಕತ್ತಿ ಹಿಡಿದು ಸರ್ಕಾರವನ್ನು ತರಬೇಕಿದೆ. ನೀವು ಅಧಿಕಾರಕ್ಕೆ ಬಂದು ನಮಗೆ ನವಲಿ ಜಲಾಶಯ ಮಾಡಿ, ಹತ್ತಾರು ಕೆರೆಗಳನ್ನ ಮಾಡಿ ನೀರು ತುಂಬಿಸಬೇಕು ಎಂದರು.
Advertisement
ಜಿಲ್ಲೆಯಲ್ಲಿ ಜನ ಏಮ್ಸ್ ಹೋರಾಟ ನಿರಂತರವಾಗಿ ಮಾಡುತ್ತಿದ್ದಾರೆ. ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi), ಜೆ.ಪಿ ನಡ್ಡಾ, ಅಮಿತ್ ಶಾ ಅವರ ಮನವೊಲಿಸಿ ಏಮ್ಸ್ ತರಬಹುದು. ಅದು ವಿಜಯೇಂದ್ರ ಅವರಿಂದ ಸಾಧ್ಯವಿದೆ ಎಂದು ಹೇಳಿದರು.ಇದನ್ನೂ ಓದಿ: Bihar | ಗಂಗಾ ನದಿಯಲ್ಲಿ ದೋಣಿ ಮಗುಚಿ ಮೂವರು ಸಾವು – ನಾಲ್ವರು ನಾಪತ್ತೆ