ಬೆಳಗಾವಿ: ಹೇಗಾದರೂ ಮಾಡಿ ನನ್ನನ್ನು ಅಧಿಕಾರದಿಂದ ತೆಗೆಯಬೇಕು ಎಂದು ಈಗಲೂ ಬಿಜೆಪಿಯವರು (BJP) ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಜನರ ಆಶೀರ್ವಾದ ಇರೋವರೆಗೂ ನನ್ನನ್ನು ಯಾರೂ ಅಲ್ಲಾಡಿಸೋಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿದರು.
ಸವದತ್ತಿ ಯಲ್ಲಮ್ಮನ (Savadatti Yallamma) ಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ 22.45 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿಗರಿಗೆ ನಿರ್ಮಿಸಲಾಗಿರುವ ಕೊಠಡಿಗಳು, ಡಾರ್ಮಿಟರಿ, ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯಗಳು ಮತ್ತು ಮಹಿಳಾ ಅಭಿವೃದ್ಧಿ ನಿಗಮದಿಂದ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳು ಮತ್ತು ಅತಿಥಿಗೃಹವನ್ನು ಉದ್ಘಾಟಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಓರ್ವ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ
Advertisement
Advertisement
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು 17 ಸ್ಥಾನ ಗೆದ್ದರು. ನಾವು 9 ಸ್ಥಾನ ಗೆದ್ದೆವು. ಜೆಡಿಎಸ್ 2 ಸ್ಥಾನ ಗೆದ್ದಿತು. ಅವರು ಏನೂ ಮಾಡದೇ ನೀವು ಅವರನ್ನು ಗೆಲ್ಲಿಸುತ್ತೀರಿ. ಏನೂ ಮಾಡದೇ ಬಿಜೆಪಿ ಪ್ರಚಾರ ಪಡೆಯುತ್ತದೆ. ಹಿಂದೂಗಳು, ಹಿಂದುತ್ವದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ನಾಡು ಉಳಿಯಬೇಕಾದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು. ನಮ್ಮ ಸರ್ಕಾರ ಇನ್ನೂ ಮೂರುವರೆ ವರ್ಷ ಇರುತ್ತದೆ. ಆ ಅವಧಿಯಲ್ಲಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಎನ್‌ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ
Advertisement
ಬಿಜೆಪಿಯವರು ಧರ್ಮ, ಆಚಾರ, ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಇಂತಹ ಕೆಲಸ ಮಾಡಿದ್ದಾರಾ? ಈ ದೇವಸ್ಥಾನಕ್ಕೆ ಕೆಳವರ್ಗದ ಜನರೇ ಜಾಸ್ತಿ ಬರೋದು. ದೇಶ, ವಿದೇಶಗಳಿಂದಲೂ ಸಹ ಭಕ್ತಾದಿಗಳು ಇಲ್ಲಿಗೆ ಬರುತ್ತಾರೆ. ಯಲ್ಲಮ್ಮ ತಾಯಿ ಬಹಳ ಶಕ್ತಿ ದೇವತೆ ಅಂತ ನಂಬಿದ್ದಾರೆ. ಆದರೆ ದೇವರು ಕೂಡ ಕೆಟ್ಟದ್ದು ಮಾಡಿ ಎಂದು ಬಯಸುವುದಿಲ್ಲ. ದೇವರು ಮತ್ತು ಧರ್ಮ ಮನುಷ್ಯನನ್ನು ಪ್ರೀತಿಸಿ ಎನ್ನುತ್ತವೆ. ಬಿಜೆಪಿಯವರ ರೀತಿ ಧರ್ಮದ ಹೆಸರಲ್ಲಿ ಜಾತಿ ಹೆಸರಲ್ಲಿ ಸಮಾಜ ಒಡೆಯಿರಿ ಎಂದು ಹೇಳುವುದಿಲ್ಲ. ಬಸವಣ್ಣನೂ ಸಹ ಇವನಾರವ ಎಂದೆನಿಸದಿರಯ್ಯ ಅಂತ ಹೇಳಿದ್ದಾರೆ. ಇದನ್ನೂ ಓದಿ: ಎರಡು ದಿನದಿಂದ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಸೇತುವೆ
Advertisement
ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕನನ್ನಾಗಿ ಮಾಡಿದ್ದೇವೆ. ಸಮಾಜದಲ್ಲಿ ಅಸಮಾನತೆ ಹೋಗಬೇಕು. ಎಲ್ಲರ ಸರ್ವೋದಯಕ್ಕಾಗಿಯೇ ನಾವು ಶಕ್ತಿ ಯೋಜನೆ ಜಾರಿ ಮಾಡಿದ್ದು, ಗೃಹಲಕ್ಷ್ಮಿ ಹಣದಲ್ಲಿ ಮಹಿಳೆಯರು ಊರಿಗೆ ಹೋಳಿಗೆ ಊಟ ಹಾಕುತ್ತಿದ್ದಾರೆ. ಅತ್ತೆ ಸೊಸೆಗೆ ಜಗಳ ಶುರುವಾಗುತ್ತದೆ ಅಂತಾ ಬಿಜೆಪಿಯವರು ಹೇಳುತ್ತಾರೆ. ಜಗಳ ಆಯ್ತಾ? ಬರೀ ಬುರುಡೆ ಹೊಡೆಯುತ್ತಾರೆ ಎಂದು ವಾಗ್ದಾಳಿ ಮಾಡಿದರು. ಇದನ್ನೂ ಓದಿ: ಟೆಡ್ಡಿಬೇರ್ ವೇಷ ಧರಿಸಿ ದರ್ಶನ್ ನೋಡಲು ಬಂದ ಅಭಿಮಾನಿ
ಯಲ್ಲಮ್ಮ ಕ್ಷೇತ್ರದಲ್ಲಿ 7ರಿಂದ 8 ಸಾವಿರ ಜನಕ್ಕಾದರೂ ಕುಡಿಯುವ ನೀರು, ವಸತಿ ವ್ಯವಸ್ಥೆ ಮಾಡಬೇಕು. ಇದನ್ನೆಲ್ಲಾ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡುತ್ತೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು. ಯಾವ ಕಾರಣಕ್ಕೂ ಕಾನೂನು ಬಾಹಿರವಾಗಿ ಮಳಿಗೆಗಳನ್ನು ಮಾಡಿಕೊಳ್ಳಬೇಡಿ. ಇದರಿಂದ ಈ ಕ್ಷೇತ್ರವೇ ಕಾನೂನು ಬಾಹಿರ ಆಗುತ್ತದೆ. ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡುವ ಸಲುವಾಗಿ ಪ್ರಾಧಿಕಾರಿಗಳನ್ನು ಸ್ಥಾಪಿಸಲಾಗಿದೆ. ಕನಿಷ್ಠ 3,000 ಸಾವಿರ ಜನರ ದಾಸೋಹಕ್ಕೆ ದಾಸೋಹ ಕೇಂದ್ರ ಸ್ಥಾಪಿಸುತ್ತೇವೆ. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದೇವೆ. ಈ ರೀತಿ ಯಾವ ಸರ್ಕಾರಗಳು ಮಾಡಿಕೊಟ್ಟಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ: ವಿಜಯೇಂದ್ರ ಏನು ಪುರೋಹಿತನಾ, ಜ್ಯೋತಿಷಿನಾ?: ಸಿಎಂ ಸಿದ್ದರಾಮಯ್ಯ
ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿಯವರು ದೇವರು, ಧರ್ಮ ಅವರ ಆಸ್ತಿ ಅಂದುಕೊಂಡಿದ್ದಾರೆ. ಬಿಜೆಪಿಯವರು ಧರ್ಮದಲ್ಲಿ ರಾಜಕಾರಣ ಮಾಡೋಕೆ ಪ್ರಯತ್ನಿಸುತ್ತಾರೆ. ಧರ್ಮ ಯಾರೊಬ್ಬನ ಸ್ವತ್ತಲ್ಲ. ದೇವನೊಬ್ಬ ನಾಮ ಹಲವು. ಧರ್ಮ ಪಾಲನೆ ವೈಯಕ್ತಿಕ ವಿಚಾರ. ಯಾವ ಧರ್ಮವನ್ನು ಬೇಕಾದರೂ ನೀವು ಪಾಲನೆ ಮಾಡಬಹುದು ಎಂದು ಕಿಡಿಕಾರಿದರು. ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಿಎಂ – ಪತ್ನಿ ಹೆಸರಲ್ಲಿ ವಿಶೇಷ ಪೂಜೆ
ಇನ್ನು ಗ್ಯಾರಂಟಿ ಯೋಜನೆಯನ್ನು ನಡೆಸಿಕೊಡುವ ಶಕ್ತಿ ಕೊಡು ಎಂದು ಪ್ರಾರ್ಥಿಸಿದ್ದೇವೆ. ಗ್ಯಾರಂಟಿ ಯೋಜನೆ ಜಾರಿಯಾದ ಮೇಲೆ ಧರ್ಮಸ್ಥಳಕ್ಕೆ ಬರುವ ಜನರ ಸಂಖ್ಯೆ ಹೆಚ್ಚಾಗಿದೆ ಅಂತ ಪತ್ರ ಬರೆದಿದ್ದಾರೆ. ರಾಮಲಿಂಗಾ ರೆಡ್ಡಿಯವರು ಅರ್ಚಕರಿಗೆ ವಿಮೆ ಯೋಜನೆಗೆ 5 ಲಕ್ಷ ಜೀವನೋದ್ಧಾರಕ್ಕೆ ಕೊಡುವ ಯೋಜನೆ ಮಾಡಿದ್ದರು. ನಾವು ಮಾಡಿದ ಬಿಲ್ ವಿರೋಧ ಮಾಡಿ ಅದನ್ನು ನಿಲ್ಲಿಸಿದ್ದಾರೆ. ಸಿಎಂ ಹೆಸರು ಅವರ ಪತ್ನಿ ಹೆಸರು, ಸಚಿವರ ಹೆಸರನ್ನು ಹೇಳಿ ಅರ್ಚಕರು ಅರ್ಚನೆ ಮಾಡಿದರು. ಅಂಥ ಅರ್ಚಕರಿಗೆ ಯೋಜನೆ ತಂದರೆ ಇದನ್ನು ವಿರೋಧ ಮಾಡುತ್ತೀರಿ. ಇಂದು ಸಿದ್ದರಾಮಯ್ಯ 30 ಕೋಟಿ ರೂ. ಅನುದಾನ ನೀಡಿ ಅಭಿವೃದ್ಧಿ ಮಾಡಿದ್ದಾರೆ. ಯಾಕೆ ಯಡಿಯೂರಪ್ಪ, ಬೊಮ್ಮಾಯಿ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ
ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್‌ಕೆ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ವಿಶ್ವಾಸ್ ವೈದ್ಯ, ರಾಜು ಕಾಗೆ, ಬಾಬಾ ಸಾಹೇಬ್ ಪಾಟೀಲ್, ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸೇರಿ ಮತ್ತಿತರರು ಇದ್ದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದು ಸಿಎಂ ಭಯೋತ್ಪಾದಕರ ಬೆಂಬಲಿಗ: ಜೋಶಿ ವಾಗ್ದಾಳಿ