ತುಮಕೂರು: ಎಲ್ಲರ ಬಳಿಯೂ ಹೋಗಿ ಸಮೀಕ್ಷೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನನ್ನ ಬಳಿ ಸಮೀಕ್ಷೆಗೆ ಯಾರೂ ಬಂದಿಲ್ಲ ಎಂದು ಸಿದ್ದಂಗಾ ಮಠದ ಸಿದ್ದಲಿಂಗ ಶ್ರೀಗಳು (Siddalinga Swamiji) ಹೇಳಿದ್ದಾರೆ.
ರಾಜ್ಯ ಸರ್ಕಾರ ಗುರುವಾರ ಜಾತಿ ಸಮೀಕ್ಷಾ ವರದಿ ಸ್ವೀಕಾರ ಮಾಡಿದ ವಿಚಾರಕ್ಕೆ ಸಿದ್ಧಗಂಗಾ ಮಠದಲ್ಲಿ (Siddaganga Matha) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ (Caste Survey) ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಯಾಕೆಂದರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು ಕೊಡಬೇಕಾಗುತ್ತದೆ. ವೈಜ್ಞಾನಿಕವಾಗಿ ಆಗಿಲ್ಲ, ವ್ಯಾಪಕವಾಗಿ ಎಲ್ಲರನ್ನೂ ಸಂದರ್ಶನ ಮಾಡಿಲ್ಲ ಎಂಬ ಕೂಗು ಕೇಳಿಬರುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಎಲೆಕ್ಷನ್ ಹೊತ್ತಲ್ಲಿ ಜಾತಿಗಣತಿ ಜ್ವಾಲೆಯಲ್ಲಿ ಸರ್ಕಾರ – ವರದಿಯಲ್ಲಿ ಏನಿದೆ? ಮುಂದೇನು?
ಗಣತಿ ವಿಚಾರದಲ್ಲಿ ಎಲ್ಲರಿಗೂ ಸಂದರ್ಶನ ಆಗಿದೆಯೋ ಗೊತ್ತಿಲ್ಲ. ನನ್ನನ್ನಂತೂ ಯಾರೂ ಬಂದು ಸಂದರ್ಶನ ಮಾಡಿಲ್ಲ. ಎಲ್ಲರನ್ನೂ ಕೇಳಿ, ಪ್ರತಿಯೊಬ್ಬರನ್ನು ವಿಚಾರಿಸಿ ವರದಿ ಮಾಡಿದರೆ ಸೂಕ್ತ. ಎಲ್ಲರಿಗೂ ಸೌಲಭ್ಯ ಲಭ್ಯವಾಗುವ ರೀತಿಯಲ್ಲಿ ಮಾಡಿದರೆ ಉಪಕಾರವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಟಿಬೆಟ್ ವ್ಯಕ್ತಿಯಿಂದ ಹತ್ತಕ್ಕೂ ಹೆಚ್ಚು ಎತ್ತುಗಳಿಗೆ ಮಚ್ಚೇಟು – ಆರೋಪಿ ವಿರುದ್ಧ ರೈತರ ಆಕ್ರೋಶ
ಪ್ರತಿಯೊಬ್ಬರನ್ನು ಕೇಳುತ್ತಾರಾ? ಅಥವಾ ಸಮಾಜದ ಮುಖಂಡರನ್ನ ಮಾತ್ರ ಕೇಳ್ತಾರಾ? ಏನು ಅಂತಾ ಗೊತ್ತಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಮಾತನಾಡುವುದಕ್ಕೆ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಂತಹ ವರದಿ ಸ್ವೀಕಾರ ಆಗಲಿ. ಆಯಾ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯಗಳು ವಿತರಣೆ ಆಗಲಿ ಎಂದು ಹೇಳಿದರು.