ಉಡುಪಿ: ನಾವು ಯಾರೂ ಕೂಡ ಚೈತ್ರಾ ಕುಂದಾಪುರಳ (Chaitra Kundapura) ಬೆಂಬಲಕ್ಕೆ ನಿಂತಿಲ್ಲ. ನಾವು ಯಾರೂ ಅವಳನ್ನು ರಕ್ಷಣೆ ಮಾಡುತ್ತಿಲ್ಲ. ಯಾರು ತಪ್ಪು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.
ಬಿಜೆಪಿ (BJP) ಟಿಕೆಟ್ ಡೀಲ್ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಟೀಂ ಸಿಸಿಬಿ (CCB) ವಶದಲ್ಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ಮಾಡಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ನನಗೂ ಚೈತ್ರಾ ಕುಂದಾಪುರಳಿಗೂ ಯಾವುದೇ ಸಂಬಂಧ ಇಲ್ಲ. ಕಾರ್ಯಕ್ರಮದಲ್ಲಿ ಸಿಕ್ಕಾಗ ಫೋಟೋ ತೆಗೆದುಕೊಂಡಿರಬಹುದು. ಕಾಸು ಕೊಟ್ಟು ಟಿಕೆಟ್ ಪಡೆಯುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ ಎಂದರು.
Advertisement
Advertisement
ಚೈತ್ರಾ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚೈತ್ರಾ ಕುಂದಾಪುರದ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಗೊತ್ತಿಲ್ಲ. ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಲಿ. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಮನವಿ ಮಾಡಿಕೊಂಡರು.
Advertisement
Advertisement
ಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ. ಉನ್ನತ ಮಟ್ಟದ ತನಿಖೆಗೆ ನಾನು ಆಗ್ರಹಿಸುತ್ತೇನೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಚೈತ್ರಾ ಹಿಂದೆ ಫೋಟೋ ತೆಗೆದುಕೊಂಡಿರಬಹುದು. ನನಗೆ ಚೈತ್ರಾ ಫೋನ್ ಮಾಡ್ಲಿಲ್ಲ ನಾನು ಕೂಡ ಅವಳಿಗೆ ಫೋನ್ ಮಾಡಿದ್ದು ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 8 ಎಕರೆ ಜಮೀನು ಖರೀದಿ, ಪೆಟ್ರೋಲ್ ಬಂಕ್ ನಿರ್ಮಾಣ – ಅಭಿನವ ಹಾಲಾಶ್ರೀ ಈಗ ನಾಪತ್ತೆ
ಉಡುಪಿ-ಚಿಕ್ಕಮಂಗಳೂರು ಎಂಪಿ ಕ್ಷೇತ್ರದಲ್ಲಿ ನನಗೆ ಟಿಕೆಟ್ ಸಿಗುತ್ತದೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ಚೈತ್ರಾ ಕುಂದಾಪುರ ವಿರುದ್ಧ ಕರಂದ್ಲಾಜೆ ಗರಂ ಆಗಿದ್ದಾರೆ. ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ. ಭಾರತೀಯ ಜನತಾ ಪಾರ್ಟಿಗೆ ಗಟ್ಟಿಮುಟ್ಟಾದ ನೇತೃತ್ವ ಇದೆ. ನರೇಂದ್ರ ಮೋದಿ ಅಮಿತ್ ಶಾ ನಡ್ದಾ ಲೋಕಸಭೆಗೆ ಯಾರಿಗೆ ಟಿಕೆಟ್ ನೀಡಬೇಕು ಅಂತ ತೀರ್ಮಾನ ಮಾಡುತ್ತಾರೆ. ಸ್ಪರ್ಧೆ ಮಾಡುತ್ತೇನೆ ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡ್ರು ಅದಕ್ಕೆ ಬೆಲೆ ಇರುವುದಿಲ್ಲ. ಯಾರು ಎಲ್ಲಿ ಸ್ಪರ್ಧೆ ಮಾಡಬೇಕು ಅಂತ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಣ ತಗೊಂಡು ಬಿಜೆಪಿ ಯಾವತ್ತೂ ಟಿಕೆಟ್ ಕೊಡಲ್ಲ. ಯಾರು ಯಾರು ಡೆಲ್ಲಿ ನಾಯಕರ, ರಾಜ್ಯನಾಯಕರ ಹೆಸರು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಲಿಂಕ್ ತನಿಖೆ ಆಗಬೇಕು, ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ. ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡಲ್ಲ. ಬಿಜೆಪಿಗೆ ಆ ಸ್ಥಿತಿಯೂ ಇಲ್ಲ ಮುಂದೆ ಬರುವುದೂ ಇಲ್ಲ. ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದರು.
Web Stories