ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ: ಬಿ.ಎಸ್. ಯಡಿಯೂರಪ್ಪ

Public TV
2 Min Read
YDR YEDIYURAPPA

ಯಾದಗಿರಿ: ಸೋಮಣ್ಣ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲರೂ ನಮ್ಮ ಜೊತೆಯಲ್ಲಿಯೇ ಇದ್ದಾರೆ, ಇರುತ್ತಾರೆ ಕೂಡಾ. ಬೆಂಗಳೂರಿಗೆ (Bengaluru) ಹೋದ ಮೇಲೆ ಎಲ್ಲರನ್ನೂ ಭೇಟಿ ಮಾಡಿ ಮಾತನಾಡುತ್ತೇನೆ. ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ (BJP) ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B.S.Yediyurappa) ಸ್ಪಷ್ಟನೆ ನೀಡಿದರು.

YDR YEDIYURAPPA

ಯಾದಗಿರಿಯಲ್ಲಿ (Yadagiri) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಮಣ್ಣ (V.Somanna) ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಾಗಳಿಗೆ ತೆರೆ ಎಳೆದರು. ಮಾಡಾಳ್ ವಿರೂಪಾಕ್ಷ (Madal Virupakshappa) ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ವಾಸ್ತವಿಕ ಸ್ಥಿತಿ ಏನು ಎನ್ನುವುದು ನಿಮಗೇ ಗೊತ್ತಿದೆ. ಅದ್ದೂರಿ ಮೆರವಣಿಗೆ ಬಗ್ಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಒಟ್ಟಿನಲ್ಲಿ ಅವರಿಗೆ ಕೋರ್ಟಿನಿಂದ (Court) ರಿಲೀಫ್ ಸಿಕ್ಕಿದೆ. ಮಾಡಾಳ್ ಅವರ ಮೇಲೆ ಪಕ್ಷದಿಂದ ಕ್ರಮ ಕೈಗೊಳ್ಳುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಆಪ್ ನಾಯಕರ ಬಂಧನ – ಹೋಳಿ ತೊರೆದು ಧ್ಯಾನ ಆರಂಭಿಸಿದ ಕೇಜ್ರಿವಾಲ್

BSYediyurappa

ಮೋದಿ, ಅಮಿತ್ ಶಾ ಎಷ್ಟೇ ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಸಿದ್ದರಾಮಯ್ಯನವರ (Siddaramaiah) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿ, ಈ ರೀತಿ ಮಾತನಾಡುವುದು ಅವರ ಸ್ವಭಾವ. ಸಿದ್ದರಾಮಯ್ಯನವರ ಹೇಳಿಕೆಗೆ ನಾನು ಟೀಕೆ ಮಾಡಲು ಇಷ್ಟಪಡುವುದಿಲ್ಲ ಎಂದರು. ಇದನ್ನೂ ಓದಿ: ದೆಹಲಿ ಮದ್ಯನೀತಿ ಹಗರಣ – KCR ಪುತ್ರಿ ಕವಿತಾಗೆ ED ಸಮನ್ಸ್

BSYediyurappa 2

ನಾವು ಹೋದ ಕಡೆಯಲ್ಲೆಲ್ಲಾ ಜನ ಬೆಂಬಲ ನೀಡುತ್ತಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ (Prajadhwani) ಯಾತ್ರೆಗೆ ಸೇರುವ ಜನ ಹಾಗೂ ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ (Vijaya Sankalpa Yatra) ಸೇರುವ ಜನರನ್ನು ನೀವೇ ಹೋಲಿಕೆ ಮಾಡಿ. ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರಲು ಏನೋನೋ ಭರವಸೆ ನೀಡುತ್ತಾರೆ. ಅವರ ಭರವಸೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಾಂಗ್ರೆಸ್‌ನವರು 200 ಯೂನಿಟ್‌ವರೆಗೆ ವಿನಾಯಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಬೊಮ್ಮಾಯಿಯವರು (Basavaraja Bommai) ಒಳ್ಳೆಯ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷದ ಬಲವರ್ಧನೆಗೆ ಪೂರಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾ.9ರ ಕರ್ನಾಟಕ ಬಂದ್‌ ವಾಪಸ್ ಪಡೆದ ಕಾಂಗ್ರೆಸ್

Share This Article
Leave a Comment

Leave a Reply

Your email address will not be published. Required fields are marked *