ಬೀದರ್: ಕ್ಯಾಂಪಸ್ ನಲ್ಲಿ ಯುವಕ-ಯುವತಿ ಕಾರಣವಿಲ್ಲದೇ ಒಟ್ಟಿಗೆ ತಿರುಗಾಡುವುದಕ್ಕೆ ಬೀದರ್ ವಿವಿ ಬ್ರೇಕ್ ಹಾಕಿದೆ.
ಬೀದರ್ ಹೊರವಲಯದ ನಂದಿ ನಗರದಲ್ಲಿರುವ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ಹಾಸ್ಟೆಲ್ ವಾರ್ಡನ್ ಜಗನ್ನಾಥ್ ಅವರು ಈ ಆದೇಶ ಹೊರಡಿಸಿದ್ದಾರೆ.
Advertisement
ಯುವಕ-ಯುವತಿ ಒಟ್ಟಿಗೆ ಸುತ್ತಾಡುತ್ತಿದ್ದರೆ ಅದು ಜನರಿಗೆ ತಪ್ಪು ಸಂದೇಶ ನೀಡುತ್ತೆ. ಹೀಗಾಗಿ ಕಾಲೇಜ್ ಕ್ಯಾಂಪಸ್‍ನಲ್ಲಿ ಹಾಗೂ ಬೀದರ್ ನಗರದಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡಿದರೆ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Advertisement
Advertisement
ಆದೇಶದಲ್ಲಿ ಏನಿದೆ?
ನಮ್ಮ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿನಿಯರು ಸಂಜೆ ವೇಳೆ ಯುವಕರ ಜೊತೆ ನಂದಿನಿ ಗೇಟ್ ಬಳಿ, ಕಾಲೇಜ್ ಕ್ಯಾಂಪಸ್ ಹಾಗೂ ನಗರದ ಹೊರವಲಯದಲ್ಲಿ ತಿರುಗಾಡುತ್ತಿರುವ ವಿಷಯ ಮುಖ್ಯ ವಾರ್ಡನ್, ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರ ಗಮನಕ್ಕೆ ಬಂದಿದೆ.
Advertisement
ಕಾಲೇಜ್ ಕ್ಯಾಂಪಸ್ ಅಲ್ಲದೇ ನಗರದ ಹೊರವಲಯದಲ್ಲೂ ಯುವಕ- ಯುವತಿಯರು ಒಟ್ಟಿಗೆ ತಿರುಗಾಡುತ್ತಿದ್ದಾರೆ. ಈ ರೀತಿ ತಿರುಗಾಡುವುದರಿಂದ ಜನರಿಗೆ ತಪ್ಪು ಸಂದೇಶ ನೀಡುತ್ತದೆ. ಯಾವುದೇ ಕಾರಣ ಇಲ್ಲದೇ ಯುವಕ-ಯುವತಿಯರು ಒಟ್ಟಿಗೆ ತಿರುಗಾಡುತ್ತಿರುವುದು ಕಂಡು ಬಂದರೆ, ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುತ್ತದೆ. ದಿಢೀರ್ ಆಗಿ ಭೇಟಿ ನೀಡಿ ಈ ರೀತಿಯ ಬೆಳವಣಿಗೆಯನ್ನು ತಡೆಯಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಎಲ್ಲ ವಿದ್ಯಾರ್ಥಿಗಳು ಕ್ಯಾಂಪಸಿನಲ್ಲಿ ಶಿಸ್ತನ್ನು ಕಾಪಾಡಬೇಕು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv